ಪಂಚ ಭಾಷೆಗಳಲ್ಲಿ ʼಗನ್ಸ್ ಅಂಡ್ ರೋಸಸ್ʼಗೆ ಸೆನ್ಸಾರ್ ಪೂರ್ಣ
ಅರ್ಜುನ್ ನಾಯಕರಾಗಿ ನಟಿಸಿರುವ ಅಂಡರ್ ವಲ್ಡ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ʼಗನ್ಸ್ ಅಂಡ್ ರೋಸಸ್ʼ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ.;
ಎಚ್ ಎಸ್ ಶ್ರೀನಿವಾಸ ಕುಮಾರ್ ನಿರ್ದೇಶನದ ಅರ್ಜುನ್ ನಾಯಕರಾಗಿ ನಟಿಸಿರುವ ಅಂಡರ್ ವಲ್ಡ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ‘ಗನ್ಸ್ ಅಂಡ್ ರೋಸಸ್’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ.
ಅಂಡರ್ ವಲ್ಡ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ʼಗನ್ಸ್ ಅಂಡ್ ರೋಸಸ್ʼ ಚಿತ್ರ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ನಿರ್ಮಾಣವಾಗಿದೆ. ಐದು ಭಾಷೆಗಳಲ್ಲೂ ಪ್ರಾದೇಶಿಕ ಸೆನ್ಸಾರ್ ಮಂಡಳಿ ಈ ಚಿತ್ರವನ್ನು ವೀಕ್ಷಿಸಿದ್ದು, ಯು/ಎ ಪ್ರಮಾಣಪತ್ರ ನೀಡಿದೆ. ಸದ್ಯದಲ್ಲೇ ಟೀಸರ್ ಹಾಗೂ ಹಾಡುಗಳು ರಿಲೀಸ್ ಆಗಲಿದ್ದು, ಏಪ್ರಿಲ್ ಕೊನೆಯಲ್ಲಿ ಚಿತ್ರ ತೆರೆಗೆ ಬರಲಿದೆ.
ಶರತ್ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಶಶಿಕುಮಾರ್ ಸಂಗೀತ ನಿರ್ದೇಶನ, ಆರ್ ಜನಾರ್ದನ್ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಮಲ್ಲೇನಹಳ್ಳಿ ರಾಜು ನಿರ್ಮಾಣ ನಿರ್ವಹಣೆ ಮತ್ತು ಮುನಿರಾಜ್ ಅವರ ಸಹ ನಿರ್ದೇಶನವಿದೆ. ಎಚ್ ಆರ್ ನಟರಾಜ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.
ಅರ್ಜುನ್ ಅವರಿಗೆ ನಾಯಕಿಯಾಗಿ ಯಶ್ಚಿಕ ನಿಷ್ಕಲ ನಟಿಸಿದ್ದಾರೆ. ಕಿಶೋರ್, ಶೋಭ್ ರಾಜ್, ಅವಿನಾಶ್, ಸುಚೇಂದ್ರ ಪ್ರಸಾದ್, ಅಶ್ವಥ್ ನೀನಾಸಂ, ಹರೀಶ್, ಜೀವನ್ ರಿಚಿ, ಅರುಣಾ ಬಾಲರಾಜ್, ಡೈಮಂಡ್ ರಾಜಣ್ಣ ಮುಂತಾದವರು ʼಗನ್ಸ್ ಅಂಡ್ ರೋಸಸ್ʼ ಚಿತ್ರದ ತಾರಾಬಳಗದಲ್ಲಿದ್ದಾರೆ.