ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಮಹಿಳಾ ಆಯೋಗದ ನೋಟಿಸ್

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆ ನಟ ದರ್ಶನ್‌ಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.;

Update: 2024-03-01 09:59 GMT
ನಟ ದರ್ಶನ್‌ಗೆ ಮಹಿಳಾ ಆಯೋಗದಿಂದ ನೋಟಿಸ್‌ ಜಾರಿ ಮಾಡಲಾಗಿದೆ.
Click the Play button to listen to article

ಬೆಂಗಳೂರು: ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ನಟ ದರ್ಶನ್‌ ಅವರಿಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.

ನಟ ಸಾರ್ವಜನಿಕ ಸಭೆಯಲ್ಲಿ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಂದು ಗೌಡತಿಯರ ಸೇನೆಯ ರಾಜ್ಯಾಧ್ಯಕ್ಷೆ ರೇಣುಕಾ ನೇತೃತ್ವದಲ್ಲಿ ಮಹಿಳಾ ಆಯೋಗಕ್ಕೆ ದೂರು ನೀಡಿದ ಹಿನ್ನೆಲೆ ಆಯೋಗ ಈ ನೋಟಿಸ್ ಜಾರಿಮಾಡಿದೆ.

ನೋಟಿಸ್ ತಲುಪಿದ ಹತ್ತು ದಿನಗಳಲ್ಲಿ ಬಂದು ಈ ಬಗ್ಗೆ ವಿವರಣೆ ನೀಡಬೇಕು ಎಂದು ಮಹಿಳಾ ಆಯೋಗ ದರ್ಶನ್‌ ಅವರಿಗೆ ಸೂಚಿಸಿದೆ.

ಏನಿದು ಘಟನೆ

ನಟ ದರ್ಶನ್ ಅವರು ಚಿತ್ರರಂಗಕ್ಕೆ ಪ್ರವೇಶಿಸಿ 25 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ʼಬೆಳ್ಳಿ ಪರ್ವ D-25ʼ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದ ದರ್ಶನ್ "ಇವತ್ತು ಇವಳಿರ್ತಾಳೆ , ನಾಳೆ ಅವಳಿರ್ತಾಳೆ. ನಾನ್ಯಾಕೆ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಲಿ. ನನಗೆ ನನ್ನ ಕೆಲಸ ಅಷ್ಟೆ ಮುಖ್ಯʼʼ ಎಂದಿದ್ದರು. ಈ ಹೇಳಿಕೆ ಭಾರೀ ವಿವಾದಕ್ಕಾ ಕಾರಣವಾಗಿತ್ತು.

Tags:    

Similar News