Chhaava Trailer | 'ಛಾವಾ' ಟ್ರೇಲರ್ ಬಿಡುಗಡೆ: 'ಯೇಸುಬಾಯಿ' ಪಾತ್ರದಲ್ಲಿ ರಶ್ಮಿಕಾ
Chhaava Trailer| 'ಛಾವ' ಚಿತ್ರದಲ್ಲಿ ವಿಕ್ಕಿ ಕೌಶಲ್ ಛತ್ರಪತಿ ಶಿವಾಜಿ ಮಹಾರಾಜರ ಪುತ್ರ ಸಂಭಾಜಿ ಮಹಾರಾಜನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.;
ಬಾಲಿವುಡ್ ನಟ ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಬಹುನಿರೀಕ್ಷಿತ ಐತಿಹಾಸಿಕ ಸಿನಿಮಾ 'ಛಾವ'ದ ಟ್ರೇಲರ್ ಬಿಡುಗಡೆಯಾಗಿದೆ. ಮರಾಠ ಛತ್ರಪತಿ ಶಿವಾಜಿ ಪುತ್ರ ಸಂಭಾಜಿಯ ಕಥಾಹಂದರವನ್ನು ಈ ಸಿನಿಮಾ ಹೊಂದಿದ್ದು, 'ಛಾವ' ಸಿನಿಮಾ ಫೆಬ್ರವರಿ 14ಕ್ಕೆ ತೆರೆಗೆ ಬರಲಿದೆ. ಸದ್ಯ ಚಿತ್ರದ ಪೋಸ್ಟರ್, ಟ್ರೈಲರ್ ಬಿಡುಗಡೆಯಾಗಿದೆ.
ಬಿಡುಗಡೆಯಾಗಿರುವ 3 ನಿಮಿಷ 8 ಸೆಕೆಂಡುಗಳ ಟ್ರೇಲರ್‌ನಲ್ಲಿ ವಿಕ್ಕಿ ಕೌಶಲ್ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕತ್ತಿವರಸೆಯಿಂದ ಹಿಡಿದು ಸಿಂಹದೊಂದಿಗೆ ಹೋರಾಡುವವರೆಗೆ ವಿಕ್ಕಿ ಕೌಶಲ್ ಅವರ ಸಂಪೂರ್ಣ ಆಕ್ಷನ್ ದೃಶ್ಯವನ್ನು ಟ್ರೇಲರ್‌ನಲ್ಲಿ ಕಾಣಬಹುದು. ನಟ ಅಕ್ಷಯ್ ಖನ್ನಾ ಅವರು ಔರಂಗಜೇಬ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಹಿಂದೆಂದೂ ನೋಡಿರದ ಅವತಾರಕ್ಕೆ ಪ್ರೇಕ್ಷಕರು ಅಚ್ಚರಿಗೊಂಡಿದ್ದಾರೆ.
'ಛಾವ' ತಾರಾಬಳಗ
'ಛಾವ' ಚಿತ್ರದಲ್ಲಿ ವಿಕ್ಕಿ ಕೌಶಲ್ ಛತ್ರಪತಿ ಶಿವಾಜಿ ಮಹಾರಾಜರ ಪುತ್ರ ಸಂಭಾಜಿ ಮಹಾರಾಜನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಅವರ ಪತ್ನಿ ಯೇಸುಬಾಯಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅಕ್ಷಯ್ ಖನ್ನಾ ಔರಂಗಜೇಬ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೆ, ಡಯಾನಾ ಪೆಂಟಿ, ಅಶುತೋಷ್ ರಾಣಾ ಮತ್ತು ದಿವ್ಯಾ ದತ್ತಾ ಕೂಡ ಚಿತ್ರದ ಒಂದು ಭಾಗವಾಗಿದ್ದಾರೆ. 'ಛವಾ' ಚಿತ್ರವನ್ನು ಲಕ್ಷ್ಮಣ್ ಉಟೇಕರ್ ನಿರ್ದೇಶಿಸಿದ್ದು, ಮ್ಯಾಡಾಕ್ ಫಿಲ್ಮ್ಸ್ ಸಂಸ್ಥೆ ಬಂಡವಾಳ ಹೂಡಿದೆ. 'ಸ್ತ್ರೀ 2' ಚಿತ್ರವನ್ನು ನಿರ್ಮಿಸಿದ ದಿನೇಶ್ ವಿಜನ್ ಇದರ ನಿರ್ಮಾಪಕರಾಗಿದ್ದಾರೆ.
ಕುಂಟುತ್ತಾ ಬಂದ ರಶ್ಮಿಕಾ ಮಂದಣ್ಣ
'ಛಾವಾ' ಚಿತ್ರದ ಟ್ರೇಲರ್ ಬಿಡುಗಡೆಗೂ ಮುನ್ನ ನಟ ವಿಕ್ಕಿ ಕೌಶಲ್ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಜಿಮ್‌ನಲ್ಲಿ ಕಾಲಿಗೆ ಪೆಟ್ಟುಮಾಡಿಕೊಂಡಿದ್ದರು. ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುವುದಾಗಿ ಹೇಳಿದ್ದರು. ಆದರೆ ಕಾಲಿಗೆ ಪೆಟ್ಟಾಗಿದ್ದರೂ ಕಾರ್ಯಕ್ರಮಕ್ಕೆ ಹಾಜರಾಗಿದ್ದರು. ವೀಲ್ಹ್ ಚೇರ್‌ನಲ್ಲಿ ಬಂದಿಳಿದ ರಶ್ಮಿಕಾ ಕುಂಟುತ್ತಲ್ಲೇ ವೇದಿಕೆ ಏರಿದರು. ಆ ವೀಡಿಯೋ ವೈರಲ್ ಆಗುತ್ತಿದೆ.
ಕೆಂಪು ಸೂಟ್‌ನಲ್ಲಿ ಸುಂದರವಾಗಿ ಕಾಣಿಸಿಕೊಂಡ ರಶ್ಮಿಕಾ
ರಶ್ಮಿಕಾ ಮಂದಣ್ಣ ಕೆಂಪು ಬಣ್ಣದ ಅನಾರ್ಕಲಿ ಸೂಟ್‌ನಲ್ಲಿ ಕಾಣಿಸಿಕೊಂಡರು. ರಶ್ಮಿಕಾ ಮಂದಣ್ಣ ಹಣೆಯ ಮೇಲೆ ಬಿಂದಿ, ಕಿವಿಯಲ್ಲಿ ಕಿವಿಯೋಲೆ ಮತ್ತು ಕೂದಲಿನಲ್ಲಿ ಬನ್ ಧರಿಸಿ ಮುದ್ದಾಗಿ ಕಾಣುತ್ತಿದ್ದರು. ಕುಂಟುತ್ತಾ ಬಂದರೂ ಪಾಪರಾಜಿಗಳಿಗೆ ಪೋಸ್ ನೀಡಿದರು. ಸಾಮಾಜಿಕ ಜಾಲತಾಣದಲ್ಲಿ ರಶ್ಮಿಕಾ ಅವರ ಕೆಲಸದ ಬದ್ಧತೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.