‘ಚಿಲ್ಲಿ ಚಿಕನ್​’ ಸಿನಿಮಾದ ಟ್ರೈಲರ್‌ ಬಿಡುಗಡೆ

ಪ್ರತೀಕ್ ಪ್ರಜೋಷ್ ಅವರು ನಿರ್ದೇಶಿಸಿರುವ `ಚಿಲ್ಲಿ ಚಿಕನ್’ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ.

Update: 2024-06-10 10:47 GMT
`ಚಿಲ್ಲಿ ಚಿಕನ್’ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ.
Click the Play button to listen to article

ಪ್ರತೀಕ್ ಪ್ರಜೋಷ್ ನಿರ್ದೇಶಿಸಿರುವ `ಚಿಲ್ಲಿ ಚಿಕನ್’ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ.

ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಭಾನುವಾರ (ಜೂ.9) ಕಲಾವಿದರ ಸಂಘದಲ್ಲಿ ನಡೆಯಿತು.

ಬೆಂಗಳೂರಿನ ಹೋಟೆಲೊಂದರಲ್ಲಿ ದುಡಿಯುತ್ತಾ ಚೈನೀಸ್ ರೆಸ್ಟೋರೆಂಟ್ ಒಂದನ್ನು ಪ್ರಾರಂಭಿಸಬೇಕೆಂಬ ಕನಸು ಕಾಣುವ ಹುಡುಗರ ಕನಸಿಗೆ ಏನೆಲ್ಲಾ ಅಡೆ ತಡೆಗಳು ಬರುತ್ತವೆ ಎಂಬುವುದು ಈ ಸಿನಿಮಾದ ಕಥಾಹಂದರವಾಗಿದೆ.

ರೆಸ್ಟೋರೆಂಟ್‌ವೊಂದರಲ್ಲಿ ಕುಳಿತಾಗ ಸಂಗೀತ ನಿರ್ದೇಶಕ ಸಿದ್ಧಾಂತ ಸುಂದರ್ ಅವರಿಗೆ ಈ ಕಾನ್ಸೆಪ್ಟ್ ಹೊಳೆದಿದೆ. ಅದನ್ನು ನಿರ್ದೇಶಕ ಪ್ರತೀಕ್ ಪ್ರಜೋಶ್ ಅವರಿಗೆ ಹೇಳುತ್ತಾರೆ. ಅವರು ಆ ಒಂದು ಲೈನ್ ಕಥೆಯ ಮೇಲೆ ಸಾಕಷ್ಟು ವರ್ಕ್ ಮಾಡಿ ಈಗ ಸಿನಿಮಾ ಮಾಡಿ ಬಿಡುಗಡೆಗೆ ಸಿದ್ದಗೊಳಿಸಿದ್ದಾರೆ.

Full View

ಸಿದ್ಧಾಂತ ಸುಂದರ್ ಮಾತನಾಡಿ ʻʻನೈಜ ಘಟನೆಯನ್ನು ಕಥೆ ಮಾಡಿ ಸಿನಿಮಾ ಮಾಡೋದು ಸುಲಭವಲ್ಲ. ಚಿತ್ರ ಚೆನ್ನಾಗಿ ಬಂದಿದೆ.‌ ಚಿತ್ರದಲ್ಲಿ 5 ಹಾಡುಗಳಿದ್ದು ಅವುಗಳಿಗೆ ಮಾರ್ಟಿನ್ ಯೋ ಸಾಹಿತ್ಯ ಬರೆದಿದ್ದಾರೆ. ಇದರಲ್ಲಿ ಒಳ್ಳೇ ಕಥೆ, ಜತೆಗೆ ಮನರಂಜನೆ ಎಲ್ಲಾ ಇದೆʼʼ ಎಂದು ಹೇಳಿದರು.

ನಿರ್ದೇಶಕ ಪ್ರತೀಕ್ ಪ್ರಜೋಶ್ ಮಾತನಾಡಿ ʻʻಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಸದ್ಯದಲ್ಲೇ ರಿಲೀಸಾಗಲಿದೆ. ನಿಮ್ಮಗಳ ಸಹಕಾರವಿರಲಿ" ಎಂದಷ್ಟೇ ಹೇಳಿದರು. ಈ ಚಿತ್ರದ ನಾಯಕನಾಗಿ ಬಿ.ವಿ. ಶೃಂಗಾ ಅಭಿನಯಿಸಿದ್ದು, ಪಾತ್ರದ ಬಗ್ಗೆ ಮಾಹಿತಿ ನೀಡಿದ ಅವರು ‘ನಾವೆಲ್ಲಾ ಇಂದು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದು, ನಿಮ್ಮಗಳ ಸಹಕಾರ ಬೇಕು. ನಾನಿಲ್ಲಿ ರೆಸ್ಟೋರೆಂಟ್ ಮಾಲಿಕನ ಪಾತ್ರ ಮಾಡಿದ್ದೇನೆ. ಕಥೆ ಕೇಳಿದಾಗ ಇಂದಿನ ಜನರೇಷನ್ ಗೆ ಹೇಳಬೇಕಾದ ವಿಷಯವಿದೆ ಅನಿಸಿತು. ಇದರಲ್ಲಿ ಹ್ಯೂಮರ್, ಫ್ಯಾಮಿಲಿ ಡ್ರಾಮಾವನ್ನು ನಿರ್ದೇಶಕರು ಚೆನ್ನಾಗಿ ಬಳಸಿದ್ದಾರೆ. ನಂದು ಇಲ್ಲಿ ಮಿಡ್ಲ್ ಕ್ಲಾಸ್ ಕುಟುಂಬದಿಂದ ಬಂದು, ಚೈನೀಸ್ ರೆಸ್ಟೋರೆಂಟ್ ಮಾಡುವ ಆಸೆಯಿಂದ ಹೇಗೆಲ್ಲಾ ಅಲೆದಾಡುತ್ತಾನೆ ಎಂಬುದನ್ನು ನೋಡಬಹುದು’ʼ ಎಂದರು.

ನಟಿ ನಿತ್ಯಶ್ರೀ ಮಾತನಾಡಿ ʻʻನನಗೆ ಕನ್ನಡದಲ್ಲಿ ಇದು 2ನೇ ಸಿನಿಮಾ. ತಮಿಳು, ತೆಲಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಒಂದಿಷ್ಟು ಸಿನಿಮಾ ಮಾಡಿದ್ದೇನೆ. ಚಿತ್ರಕ್ಕೆ ತಂಡದ ಶ್ರಮ ತುಂಬಾ ಇದ್ದು ಎಲ್ಲಾ ಕಲಾವಿದರು ಭಾಷೆ ಕಲೆತು ಅಭಿನಯ ಮಾಡುವ ಜೊತೆಗೆ ಡಬ್ಬಿಂಗ್ ಕೂಡ ಮಾಡಿದ್ದಾರೆ’ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಚಿತ್ರದ ನಾಯಕಿ ರಿನಿ, ಮಣಿಪುರ ನಟ ಬಿಜು ತಾಂಜಿಂ, ಆಸಾಂ ಕಲಾವಿದ ಹಿರಾಕ್ ಸೋನಾವಾಲ್, ಉತ್ತರಕಾಂಡದ ನಟ ಜಿಂಪಾ ಭುಟಿಯಾ, ನಿರ್ಮಾಪಕ ದೀಪ್ ಭೀಮಾ ಜಿಹಾನಿ ತಮ್ಮ ಅನುಭವ ಹಂಚಿಕೊಂಡರು. ಅಂದಂಗೆ ಈಗಾಗಲೇ ಈ ಚಿತ್ರವನ್ನು ನೋಡಿದ ನಟ ರಮೇಶ್‌ ಅರವಿಂದ್, ಹೇಮಂತ್ ರಾವ್ ಹಾಗೂ ಬೇರೆ ಭಾಷೆಯ ಪ್ರಮುಖರು ಮೆಚ್ಚಿದ್ದಾರೆ. ಈ ತಂಡ ಬೆಂಗಳೂರಿನಲ್ಲಿ ಒಡೆದು ಹಾಕಿರುವ ಕಾವೇರಿ ಥಿಯೇಟರ್ ಬಗ್ಗೆ ಸಾಂಗ್ ಮಾಡಿ ಅದನ್ನು ಟ್ರಿಬ್ಯೂಟ್ ಕೊಡುತ್ತಿದೆ. ಈ ಗೀತೆಗೆ ಪತ್ರಕರ್ತ ಶ್ರೀಧರ್ ಶಿವಮೊಗ್ಗ ಸಾಹಿತ್ಯ ಬರೆದಿದ್ದಾರೆ.

Tags:    

Similar News