ಮೇ 10 ಕ್ಕೆ ರಿಲೀಸ್ ಆಗ್ತಿಲ್ಲ ಕಾಮಿಡಿ ಕಿಂಗ್ ಶರಣ್ ಸಿನಿಮಾ 'ಛೂ ಮಂತರ್'
'ಛೂ ಮಂತರ್' ಸಿನಿಮಾ ಇದೇ ತಿಂಗಳು ಮೇ 10ರಂದು ರಿಲೀಸ್ ಆಗುವುದಾಗಿ ಘೋಷಣೆಯಾಗಿತ್ತು. ಆದರೆ ಈ ಸಿನಿಮಾ ಮೇ 10ಕ್ಕೆ ರಿಲೀಸ್ ಆಗುತ್ತಿಲ್ಲ.;
ಕಾಮಿಡಿ ಕಿಂಗ್ ಶರಣ್ ಅಭಿನಯದ ಹೊಚ್ಚ ಹೊಸ ಸಿನಿಮಾ 'ಛೂ ಮಂತರ್'. ಕೆಲವು ವಾರಗಳ ಹಿಂದಷ್ಟೇ 'ಅವತಾರ ಪುರುಷ 2' ಸಿನಿಮಾ ಬಿಡುಗಡೆಯಾಗಿತ್ತು. ಈಗ ಮತ್ತೊಂದು ಸಿನಿಮಾ ಇದೇ ತಿಂಗಳು ಮೇ 10ರಂದು ರಿಲೀಸ್ ಆಗುವುದಾಗಿ ಘೋಷಣೆಯಾಗಿತ್ತು. ಆದರೆ ಈ ಸಿನಿಮಾ ಮೇ 10ಕ್ಕೆ ರಿಲೀಸ್ ಆಗುತ್ತಿಲ್ಲ.
'ಛೂ ಮಂತರ್' ಸಿನಿಮಾ ಬಿಡುಗಡೆಗೆ ಇನ್ನೇನು ಕೆಲವು ದಿನಗಳು ಬಾಕಿ ಉಳಿದಿದೆ ಅನ್ನುವಾಗಲೇ ಮುಂದೂಡುವುದಕ್ಕೆ ಕಾರಣವಿದೆ. ಈ ಸಿನಿಮಾವನ್ನು ಈಗಾಗಲೇ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯ ವಿತರಕರು ವೀಕ್ಷಿಸಿದ್ದಾರಂತೆ. ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಹಾರರ್ ಸಿನಿಮಾ. ತುಂಬಾ ಚೆನ್ನಾಗಿ ಮೂಡಿಬಂದಿದೆ. ಎಲ್ಲ ಭಾಷೆಯ ಜನರು ನೋಡುವ ಸಿನಿಮಾ ಎಂಬ ಅಭಿಪ್ರಾಯ ನೀಡಿದ್ದಾರಂತೆ. ಈ ಕಾರಣಕ್ಕೆ ನಿರ್ಮಾಪಕ ತರುಣ್ ಶಿವಪ್ಪ ಈ ಸಿನಿಮಾವನ್ನು ಮುಂದೂಡುವುದಕ್ಕೆ ನಿರ್ಧರಿಸಿದ್ದಾರೆ. ಸೂಕ್ತ ಸಮಯವನ್ನು ನೋಡಿಕೊಂಡು ಸಿನಿಮಾ ರಿಲೀಸ್ ಮಾಡುವುದಕ್ಕೆ ನಿರ್ಧರಿಸಿದ್ದಾರೆ. ಸದ್ಯದಲ್ಲೇ ಸಿನಿಮಾ ತಂಡ ಹೊಸ ರಿಲೀಸ್ ಡೇಟ್ ಅನ್ನು ಅನೌನ್ಸ್ ಮಾಡುವ ಸಾಧ್ಯತೆಯಿದೆ.
'ಕರ್ವ' ಅಂತಹ ಹಿಟ್ ಸಿನಿಮಾ ಕೊಟ್ಟಿದ್ದ ನವನೀತ್ 'ಛೂ ಮಂತರ್' ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ 'ಛೂ ಮಂತರ್' ಟೀಸರ್, ಟ್ರೈಲರ್ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿದೆ. ಶರಣ್ , ಚಿಕ್ಕಣ್ಣ, ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಸೇರಿದಂತೆ ಹಲವು ಮಂದಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಸಂಗೀತ ನಿರ್ದೇಶನವಿದೆ. ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.