ʼಕಲ್ಕಿʼ ಚಿತ್ರದ ಟ್ರೈಲರ್ ರಿಲೀಸ್‌ಗೆ ಮುಹೂರ್ತ ಫಿಕ್ಸ್
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ನಾಗ್ ಅಶ್ವಿನ್ ಆ್ಯಕ್ಷನ್ ಕಟ್ ಹೇಳಿರುವ 'ಕಲ್ಕಿ 2898 ಎಡಿ' ಸಿನಿಮಾದ ಬಹುನಿರೀಕ್ಷಿತ ಟ್ರೇಲರ್ ರಿಲೀಸ್ ಡೇಟ್ ಚಿತ್ರತಂಡ ಅನೌನ್ಸ್ ಮಾಡಿದೆ.;
ಭಾರತೀಯ ಚಿತ್ರರಂಗದ 2024ರ ಬಹುನಿರೀಕ್ಷಿತ ಚಿತ್ರ 'ಕಲ್ಕಿ 2898 ಎಡಿ' ಬಿಡುಗಡೆ ದಿನಾಂಕ ಸಮೀಪಿಸುತ್ತಿದ್ದು, ಸಿನಿಮಾ ಸುತ್ತಲಿನ ಕುತೂಹಲ, ನಿರೀಕ್ಷೆ ಹೆಚ್ಚುತ್ತಲೇ ಇದೆ. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ನಾಗ್ ಅಶ್ವಿನ್ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾದ ಬಹುನಿರೀಕ್ಷಿತ ಟ್ರೇಲರ್ ರಿಲೀಸ್ ಡೇಟ್ ಚಿತ್ರತಂಡ ಅನೌನ್ಸ್ ಮಾಡಿದೆ.
ಜೂನ್ 10ರಂದು ʼಕಲ್ಕಿ 2898 ಎಡಿʼ ಟ್ರೈಲರ್ ರಿಲೀಸ್ ಆಗಲಿದೆ. ಹೊಸ ಪೋಸ್ಟರ್ ರಿಲೀಸ್ ಮಾಡಿರುವ ಚಿತ್ರತಂಡ ಆ ಮೂಲಕ ಟ್ರೈಲರ್ ರಿಲೀಸ್ ದಿನಾಂಕವನ್ನು ಘೋಷಿಸಿದೆ. ಪೋಸ್ಟರ್‌ನಲ್ಲಿ ಗುಡ್ಡದ ಮೇಲೆ ಪ್ರಭಾಸ್ ನಿಂತಿರುವ ಚಿತ್ರ ಕಂಡು ಬಂದಿದ್ದು, ‘ಎಲ್ಲವೂ ಬದಲಾಗುವ ಸಮಯ ಬಂದಿದೆ’ ಎಂದು ಬರೆಯಲಾಗಿದೆ. ಭೂತ ಮತ್ತು ಭವಿಷ್ಯತ್ ಕಾಲದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರವನ್ನು ವೈಜಯಂತಿ ಮೂವೀಸ್ ನಿರ್ಮಿಸುತ್ತಿದೆ.
ಈ ಸಿನಿಮಾದಲ್ಲಿ ಪ್ರಭಾಸ್ ಭೈರವನಾಗಿ ಮಿಂಚಲಿದ್ದು, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ದಿಶಾ ಪಠಾಣಿ, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.