ಮಲಯಾಳಂ ನಲ್ಲೂ 'S/O ಮುತ್ತಣ್ಣ' ಸಿನಿಮಾಗೆ ಬೇಡಿಕೆ; ಸೆಪ್ಟೆಂಬರ್ 12 ರಂದು ಬಿಡುಗಡೆ

ಕನ್ನಡ, ತೆಲುಗು ಹಾಗೂ ಮಲಯಾಳಂನಲ್ಲಿ ಏಕಕಾಲಕ್ಕೆ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.;

Update: 2025-08-18 07:34 GMT

ಪ್ರಣಮ್ ದೇವರಾಜ್‌ಗೆ ನಾಯಕಿಯಾಗಿ ಖುಷಿ ರವಿ ನಟಿಸಿದ್ದಾರೆ.  

`ಸು ಫ್ರಮ್ ಸೋ' ಭರ್ಜರಿ ಯಶಸ್ಸಿನ ನಂತರ ಕನ್ನಡ ಚಿತ್ರಗಳ ಬೇಡಿಕೆ ಹೆಚ್ಚಾಗಿದೆ. ಇದೀಗ ಪ್ರಣಮ್ ದೇವರಾಜ್ ನಾಯಕನಾಗಿ ನಟಿಸಿರುವ 'S/O ಮುತ್ತಣ್ಣ' ಸಿನಿಮಾಗೆ ಚಿತ್ರದ ಕಥೆಗೆ ಮಲಯಾಳಂನಲ್ಲೂ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಆಗಸ್ಟ್ 22 ರಂದು ಬಿಡುಗಡೆಯಾಗಬೇಕಿದ್ದ ʻs/o ಮುತ್ತಣ್ಣʼ ಚಿತ್ರವನ್ನು ಸೆಪ್ಟೆಂಬರ್ 12 ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಕನ್ನಡ, ತೆಲುಗು ಹಾಗೂ ಮಲಯಾಳಂನಲ್ಲಿ ಏಕಕಾಲಕ್ಕೆ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆದಿರುವ ಈ ಸಿನಿಮಾದ ಟ್ರೇಲರ್ ಆಗಸ್ಟ್ 22 ರಂದು ಬಿಡುಗಡೆಯಾಗಲಿದೆ. ಬಹು ನಿರೀಕ್ಷಿತ ಈ ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

 ಪ್ರಣಾಮ್ ದೇವರಾಜ್ ಅವರಿಗೆ ನಾಯಕಿಯಾಗಿ ದಿಯಾ ಖ್ಯಾತಿಯ ಖುಷಿ ರವಿ ಅಭಿನಯಿಸಿದ್ದಾರೆ. ಇದೊಂದು ತಂದೆ - ಮಗನ ಬಾಂಧವ್ಯದ ಚಿತ್ರವಾಗಿದ್ದು, ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಚೇಂದ್ರ ಪ್ರಸಾದ್‌, ಗಿರೀಶ್‌ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್‌ ಪ್ರಭು, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

 ಸಚಿನ್ ಬಸ್ರೂರು ಸಂಗೀತವಿರುವ 's/o ಮುತ್ತಣ್ಣ' ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಅವರ ಸಂಕಲನ ಬಹು ನಿರೀಕ್ಷಿತ ಈ ಚಿತ್ರಕ್ಕಿದೆ. ಪುರಾತನ ಫಿಲಂಸ್ ಈ ಸಿನಿಮಾವನ್ನು ನಿರ್ಮಾಣ ಮಾಡಿದೆ. ಶ್ರೀಕಾಂತ್ ಹುಣಸೂರು ನಿರ್ದೇಶನದ ನಿರ್ದೇಶನ ಮಾಡಿದ್ದಾರೆ. 

Tags:    

Similar News