ಅ.11ಕ್ಕೆ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ತೆರೆಗೆ!
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳಿಗೆ ‘ಮಾರ್ಟಿನ್’ ಚಿತ್ರತಂಡ ಗುಡ್ ನ್ಯೂಸ್ ಕೊಟ್ಟಿದೆ. ಇದೇ ಅಕ್ಟೋಬರ್ 11 ಕ್ಕೆ ಮಾರ್ಟಿನ್ ಸಿನಿಮಾ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ.;
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳಿಗೆ ‘ಮಾರ್ಟಿನ್’ ಚಿತ್ರತಂಡ ಗುಡ್ ನ್ಯೂಸ್ ಕೊಟ್ಟಿದೆ. ಇದೇ ಅಕ್ಟೋಬರ್ 11 ಕ್ಕೆ ಮಾರ್ಟಿನ್ ಸಿನಿಮಾ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಬೆಂಗಳೂರಿನ ಸ್ಟಾರ್ ಹೋಟೆಲ್‌ವೊಂದರಲ್ಲಿ ಮಾರ್ಟಿನ್ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆದಿದ್ದು, ಈ ವೇಳೆ ಚಿತ್ರತಂಡ ಚಿತ್ರ ಬಿಡುಗಡೆ ದಿನಾಕವನ್ನು ಘೋಷಣೆ ಮಾಡಿದೆ.
ಧ್ರುವ ಸರ್ಜಾ ಅಭಿನಯದ 5ನೇ ಚಿತ್ರ ಮಾರ್ಟಿನ್. ಎ.ಪಿ.ಅರ್ಜುನ್ ನಿರ್ದೇಶನದ ಮಾರ್ಟಿನ್ 5 ಭಾಷೆಯಲ್ಲಿ ರಿಲೀಸ್ ಆಗಲಿದೆ. ಆ ಮೂಲಕ 2024 ರ ಹೈವೋಲ್ಟೇಜ್ ಸಿನಿಮಾ ಇದಾಗಲಿದೆ. ಪೊಗರು ಸಿನಿಮಾ ಬಳಿಕ 3 ವರ್ಷಗಳ ನಂತರ ಬೆಳ್ಳಿತೆರೆ ಮೇಲೆ ಧ್ರುವ ಸರ್ಜಾ ಅವರ ಮತ್ತೊಂದು ಸಿನಿಮಾ ಬಿಡುಗಡೆಯಾಗಲಿದೆ.
ಮಾರ್ಟಿನ್ ಚಿತ್ರಕ್ಕೆ ಖ್ಯಾತ ಬಹುಭಾಷಾ ನಟ ಅರ್ಜುನ್ ಸರ್ಜಾ ಕಥೆ ಬರೆದಿದ್ದು, ವಾಸವಿ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ. ಮೆಹ್ತಾ ಈ ಚಿತ್ರ ನಿರ್ಮಿಸಿದ್ದಾರೆ. ‘ಮಾರ್ಟಿನ್’ ಚಿತ್ರಕ್ಕೆ ಲೂಪ್ ಸ್ಟುಡಿಯೊದಲ್ಲಿ ಮಾತಿನ ಜೋಡಣೆ ಇತ್ತೀಚೆಗೆ ನಡೆದಿತ್ತು.
2021ರ ಸೆಪ್ಟೆಂಬರ್‌ನಲ್ಲಿ ಚಿತ್ರದ ಚಿತ್ರೀಕರಣ ಆರಂಭವಾಗಿತ್ತು. ಹೈದರಾಬಾದ್‌ನಲ್ಲಿ ಸೆಟ್ ಹಾಕಿ 45 ದಿನ ಶೂಟ್ ಮಾಡಿದ್ದ ಚಿತ್ರತಂಡ, ವೈಜಾಗ್‌ನಲ್ಲಿ ಚೇಸ್ ಸೀನ್ ಹಾಗೂ ಕಾಶ್ಮೀರದಲ್ಲಿ 25 ದಿನದ ಚಿತ್ರೀಕರಣ ನಡೆಸಿತ್ತು.
ಒಟ್ಟಾರೆ ಚಿತ್ರಕ್ಕೆ 240 ದಿನದ ಚಿತ್ರೀಕರಣ ನಡೆದಿದೆ. ಚಿತ್ರದ ಆಡಿಯೊ ಹಕ್ಕನ್ನು ಅಧಿಕ ಮೊತ್ತ ನೀಡಿ ‘ಸರಿಗಮಪ’ ಪಡೆದುಕೊಂಡಿದೆ. ಮಣಿ ಶರ್ಮ ಅವರ ಸಂಗೀತ ನಿರ್ದೇಶನದಲ್ಲಿ ಚಿತ್ರದ ಹಾಡುಗಳು ಮೂಡಿಬಂದಿದ್ದು, ರವಿ ಬಸ್ರೂರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.
ಸತ್ಯ ಹೆಗಡೆ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಚಿತ್ರದ ತಾರಾಬಳಗದಲ್ಲಿ ಅನ್ವೇಶಿ ಜೈನ್, ಜಾರ್ಜಿಯ ಆಂಡ್ರಿಯಾನಿ, ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಪಾಠಕ್ ಮುಂತಾದವರಿದ್ದಾರೆ.