ಶಿವಣ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಾಧ್ಯತೆ

ಅನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಿವರಾಜ್ ಕುಮಾರ್ ಅವರನ್ನು ಇಂದು ಡಿಸ್ಚಾರ್ಜ್‌ ಮಾಡುವ ಸಾಧ್ಯತೆ ಇದೆ. ಡಿಸ್ಚಾರ್ಜ್ ಆದ ನಂತರ ಚುನಾವಣೆ ಪ್ರಚಾರಕ್ಕೆ ತೆರಳೋ ಸಾಧ್ಯತೆ ಇದೆ.;

Update: 2024-04-02 07:32 GMT
ಶಿವರಾಜ್ ಕುಮಾರ್ ಅವರನ್ನು ಇಂದು ಡಿಸ್ಚಾರ್ಜ್‌ ಮಾಡುವ ಸಾಧ್ಯತೆ ಇದೆ.

ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರು ಸೋಮವಾರ ( ಎಪ್ರಿಲ್‌ 1) ರಂದು ಬೆಂಗಳೂರಿನ ವೈದ್ಯೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

ಶಿವಮೊಗ್ಗ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದ ಶಿವಣ್ಣ ಭಾನುವಾರ ದೇವನಹಳ್ಳಿ ಬಳಿ ಸಿನಿಮಾವೊಂದರ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

ಶೂಟಿಂಗ್ ಸಂದರ್ಭದಲ್ಲಿ ಸುಸ್ತು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ತೆರಳಿದ್ದಾರೆ. ಸೆಟ್ ನಲ್ಲಿನ ಧೂಳಿನ ಸಮಸ್ಯೆಯಿಂದಾಗಿ ಈ ರೀತಿಯ ಸಮಸ್ಯೆ ಉಂಟಾಗಿದ್ದು, ಒಂದು ದಿನ ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸೂಚನೆ ನೀಡಿದ್ದರಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಅದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರನ್ನು ಇಂದು ಡಿಸ್ಚಾರ್ಜ್‌ ಮಾಡುವ ಸಾಧ್ಯತೆ ಇದೆ. ಡಿಸ್ಚಾರ್ಜ್ ಆದ ನಂತರ ಚುನಾವಣೆ ಪ್ರಚಾರಕ್ಕೆ ತೆರಳೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Tags:    

Similar News