‘Emergency’ row | ಸಿಬಿಎಫ್‌ಸಿಗೆ ನಿರ್ದೇಶನ ನೀಡಲು ಹೈಕೋರ್ಟ್ ನಕಾರ

Update: 2024-09-04 08:19 GMT

ಕಂಗನಾ ರನೌತ್ ಅಭಿನಯದ ಎಮರ್ಜೆನ್ಸಿ ಚಿತ್ರಕ್ಕೆ ಪ್ರಮಾಣಪತ್ರ ನೀಡಲು ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ)ಗೆ ನಿರ್ದೇಶನ ನೀಡಲು ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 4) ನಿರಾಕರಿಸಿದೆ.

ಅಂಥ ನಿರ್ದೇಶನವು ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶದಲ್ಲಿ ಮಧ್ಯಪ್ರವೇಶ ಆಗುತ್ತದೆ ಎಂದು ಹೇಳಿದೆ. ಇದರಿಂದ ಚಿತ್ರವು ಸೆಪ್ಟೆಂಬರ್ 6 ರಂದು ಬಿಡುಗಡೆಯಾಗುವ ಸಾಧ್ಯತೆಯಿಲ್ಲ.

ಹೈಕೋರ್ಟ್ ಆದೇಶ: ಸೆನ್ಸಾರ್ ಮಂಡಳಿಯ ಪ್ರಮಾಣಪತ್ರ ಸ್ವೀಕರಿಸಿಲ್ಲ ಎಂದು ತಿಳಿಸಿದ ಬಳಿಕ ಮಧ್ಯಪ್ರದೇಶ ಹೈಕೋರ್ಟ್ ಚಿತ್ರದ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಲೇವಾರಿ ಮಾಡಿದೆ.

ಅರ್ಜಿದಾರರ ಪರ ವಕೀಲ ಎನ್‌.ಎಸ್‌. ರುಪ್ರಾ, ಚಿತ್ರವು ಸಿಖ್ ಸಮುದಾಯದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದರು. ಸಿನಿಮಾಕ್ಕೆ ಪ್ರಮಾಣಪತ್ರ ನೀಡಿಲ್ಲ ಎಂದು ಸಿಬಿಎಫ್‌ಸಿಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಹೀಗಾಗಿ, ಸಿನಿಮಾ ಸೆಪ್ಟೆಂಬರ್ 6 ರಂದು ಬಿಡುಗಡೆಯಾಗುವುದಿಲ್ಲ.ಆನಂತರ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಸಚ್‌ದೇವ ಮತ್ತು ನ್ಯಾ.ವಿನಯ್ ಸರಾಫ್ ಅವರ ವಿಭಾಗೀಯ ಪೀಠವು ಅರ್ಜಿಯನ್ನು ವಿಲೇವಾರಿ ಮಾಡಿದೆ ಎಂದು ಅವರು ಮಾಹಿತಿ ನೀಡಿದರು. 

ಕಂಗನಾಗೆ ನೋಟಿಸ್: ಎರಡು ಸಿಖ್ ಸಂಘಟನೆಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯೆಯಾಗಿ ರನೌತ್, ಕೇಂದ್ರ ಸರ್ಕಾರ, ಸೆನ್ಸಾರ್ ಮಂಡಳಿ ಮತ್ತು ಇತರರಿಗೆ ಹೈಕೋರ್ಟ್‌ ನೋಟಿಸ್ ಜಾರಿ ಮಾಡಿದೆ.

Tags:    

Similar News