ಯಶಸ್ವಿ 50 ದಿನಗಳನ್ನು ಪೂರೈಸಿದ ಫಾರೆಸ್ಟ್ ಸಿನಿಮಾ
ಎನ್ ಎಂ ಕಾಂತರಾಜ್ ಎನ್.ಎಂ.ಕೆ. ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ʻಫಾರೆಸ್ಟ್ ಸಿನಿಮಾʼ ನಿರ್ಮಿಸಿದ್ದಾರೆ. ಚಂದ್ರಮೋಹನ್ ನಿರ್ದೇಶಿಸಿರುವ ಈ ಚಿತ್ರಕ್ಕೆ ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಕಥೆ, ಚಿತ್ರಕಥೆ ರಚಿಸಿದ್ದಾರೆ.;
ಫಾರೆಸ್ಟ್ ಸಿನಿಮಾ
ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ ಸಿನಿಮಾ ʻಫಾರೆಸ್ಟ್ʼ ಸಿನಿಮಾ ಯಶಸ್ವಿ 50 ದಿನಗಳನ್ನು ಪೂರೈಸಿದೆ.
ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಅವರಂಥ ಸ್ಟಾರ್ ಕಲಾವಿದರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಈ ಸಿನಿಮಾ ಅಮೆಜಾನ್ ಪ್ರೈಮ್ ನಲ್ಲೂ ಬಿಡುಗಡೆಯಾಗಿತ್ತು. ಅಲ್ಲೂ ಈ ಚಿತ್ರವನ್ನು ಅಧಿಕ ಸಂಖ್ಯೆಯ ಜನರು ವೀಕ್ಷಿಸುತ್ತಿದ್ದು ಒಂದೊಳ್ಳೆ ಕಂಟೆಂಟ್‌ವುಳ್ಳ ಸಿನಿಮಾಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಎನ್ ಎಂ ಕಾಂತರಾಜ್ ಎನ್.ಎಂ.ಕೆ. ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ʻಫಾರೆಸ್ಟ್ ಸಿನಿಮಾʼ ನಿರ್ಮಿಸಿದ್ದಾರೆ. ಚಂದ್ರಮೋಹನ್ ನಿರ್ದೇಶಿಸಿರುವ ಈ ಚಿತ್ರಕ್ಕೆ ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೆ ಸಂಭಾಷಣೆಯನ್ನೂ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್‌ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ|ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‌ಕುಮಾರ್ ಮುಂತಾದ ಹಿರಿಯ ಹಾಗೂ ಕಿರಿಯ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.