ʻಗನ್ಸ್ ಆಂಡ್ ರೋಸಸ್ʼ ಗೆ ಸೆನ್ಸಾರ್ ಸಮ್ಮತಿ
ಅರ್ಜುನ್ ನಾಯಕರಾಗಿ ನಟಿಸಿರುವ ʻಗನ್ಸ್ ಅಂಡ್ ರೋಸಸ್ʼ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ಸಿಕ್ಕಿದೆ.;
ಎಚ್ ಎಸ್ ಶ್ರೀನಿವಾಸಕುಮಾರ್ ನಿರ್ದೇಶನ, ಅರ್ಜುನ್ ನಾಯಕರಾಗಿ ನಟಿಸಿರುವ ʻಗನ್ಸ್ ಅಂಡ್ ರೋಸಸ್ʼ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ಲಭ್ಯವಾಗಿದೆ
ಸಿನಿಮಾ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಿದೆ. ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆ ಸಿನೆಮಾಕ್ಕೆ ಸೆನ್ಸಾರ್ ಅನುಮತಿ ಸಿಗಬೇಕಿದೆ. ಏಪ್ರಿಲ್ ನಲ್ಲಿ ಬೇಸಿಗೆ ರಜೆ ಆರಂಭವಾಗಲಿದ್ದು, ಅಷ್ಟರಲ್ಲಿ ತೆರೆಗೆ ತರಲು ಸಿದ್ದತೆ ನಡೆಯುತ್ತಿದೆ.
ಕಥೆಗಾರ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ನಾಯಕನಾಗಿ ನಟಿಸಿರುವ ಚಿತ್ರದ ನಾಯಕಿ ಯಶ್ಚಿಕ ನಿಷ್ಕಲ. ಕಿಶೋರ್, ಶೋಭ್ ರಾಜ್, ಅವಿನಾಶ್, ಸುಚೇಂದ್ರ ಪ್ರಸಾದ್, ಅಶ್ವಥ್ ನೀನಾಸಂ, ಹರೀಶ್, ಜೀವನ್ ರಿಚಿ, ಅರುಣಾ ಬಾಲರಾಜ್, ಡೈಮಂಡ್ ರಾಜಣ್ಣ ಮುಂತಾದವರ ತಾರಾಬಳಗವಿದೆ.
ಎಚ್ ಆರ್ ನಟರಾಜ್ ನಿರ್ಮಿಸಿದ್ದು, ಶರತ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ, ಶಶಿಕುಮಾರ್ ಸಂಗೀತ ನಿರ್ದೇಶನ, ಆರ್ ಜನಾರ್ದನ್ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಮಲ್ಲೇನಹಳ್ಳಿ ರಾಜು ನಿರ್ಮಾಣ ನಿರ್ವಹಣೆ ಇದ್ದು, ಮುನಿರಾಜ್ (ಕಬ್ಜ) ಸಹ ನಿರ್ದೇಶಕರು.