ರೆಟ್ರೋ ಸ್ಟೈಲ್‌ನಲ್ಲಿ ಮೂಡಿಬಂದ ʼಹೇಳು ಗೆಳತಿʼ; ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

ಅಂಕಿತಾ ಅಮರ್ ಪ್ರಮುಖ ಭೂಮಿಕೆಯಲ್ಲಿರುವ ʼಇಬ್ಬನಿ ತಬ್ಬಿದ ಇಳೆಯಲಿʼ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ.

Update: 2024-07-31 14:08 GMT
ʼಇಬ್ಬನಿ ತಬ್ಬಿದ ಇಳೆಯಲಿʼ ಸಿನಿಮಾದ ಮತ್ತೊಂದು ಹಾಡು ರಿಲೀಸ್‌ ಆಗಿದೆ.

ವಿಹಾನ್, ಅಂಕಿತಾ ಅಮರ್ ಪ್ರಮುಖ ಭೂಮಿಕೆಯಲ್ಲಿ ನಟಿಸಿರುವ ʻಇಬ್ಬನಿ ತಬ್ಬಿದ ಇಳೆಯಲಿʼ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ‘ಹೇಳು ಗೆಳತಿ’ ಎಂಬ ಮೆಲೋಡಿ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ರೆಟ್ರೋ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಈ ಮಧುರ ಗೀತೆಯನ್ನು ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಿದೆ. ಚರಣ್‌ರಾಜ್ ಈ ಹಾಡನ್ನು ಹಾಡಿದ್ದಾರೆ. 

ನಾಗಾರ್ಜುನ ಶರ್ಮಾ ಸಾಹಿತ್ಯವಿರುವ ಈ ಹಾಡಿಗೆ ಗಗನ್ ಬಡೇರಿಯಾ ಸಂಗೀತ ಸಂಯೋಜಿಸಿದ್ದಾರೆ. ದೀಕ್ಷಿತ್ ಕುಮಾರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಹಾಡಿಗೆ ಕೇಳುಗರು ಫಿದಾ ಆಗಿದ್ದಾರೆ.

Full View

ಕಿರಿಕ್ ಪಾರ್ಟಿ ಹಾಗೂ ಅವನೇ ಶ್ರೀಮನ್ನಾರಾಯಣ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಚಂದ್ರಜಿತ್ ಬೆಳಿಯಪ್ಪ, ರಕ್ಷಿತ್‌ರ ‘ಸೆವೆನ್ ಆಡ್ಸ್’ ಬರಹಗಾರರ ತಂಡದ ಪ್ರಮುಖ ಸದಸ್ಯ ಹಾಗೂ ಕಥಾಸಂಗಮ ಚಿತ್ರದ ನಿರ್ದೇಶಕರಲ್ಲೊಬ್ಬರಾಗಿದ್ದರು. ಇದೀಗ ʼಇಬ್ಬನಿ ತಬ್ಬಿದ ಇಳೆಯಲಿʼ ಚಿತ್ರವನ್ನು ನಿರ್ದೇಶಿಸಿದ್ದಾರೆ. ಪರವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ, ರಕ್ಷಿತ್ ಶೆಟ್ಟಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ತೆಲುಗಿನ ಸೂಪರ್‌ ಹಿಟ್ ‘ಗೀತಾಂಜಲಿ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ಗಿರಿಜಾ ಶೆಟ್ಟರ್ ಬಹಳ ವರ್ಷಗಳ ನಂತರ ನಟನೆಗೆ ಮರಳಿ ಬಂದಿದ್ದಾರೆ. ಮಯೂರಿ ನಟರಾಜ್, ಅನಿರುದ್ಧ್ ಭಟ್, ದಾಮಿನಿ ಧನರಾಜ್ ಮೊದಲಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚಂದ್ರಜಿತ್ ಬೆಳಿಯಪ್ಪ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. 

ಸದ್ಯ ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ಚಿತ್ರತಂಡ ಮಗ್ನವಾಗಿದ್ದು, ವಿಎಫ್‌ಎಕ್ಸ್ ಕೆಲಸ ಪಿನಾಕ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ, ರಕ್ಷಿತ್ ಕಾಪ್ ಸಂಕಲನ ಈ ಚಿತ್ರಕ್ಕಿದೆ.

Tags:    

Similar News