ʼಬ್ಯಾಕ್ ಬೆಂಚರ್ಸ್ʼ ಚಿತ್ರತಂಡದಿಂದ ಹೋಳಿ ಹಾಡು ಬಿಡುಗಡೆ
‘ಬ್ಯಾಕ್ ಬೆಂಚರ್ಸ್’ ಚಿತ್ರದಿಂದ ಹೋಳಿ ಹಬ್ಬಕ್ಕಾಗಿ ಸುಮಧುರ ಹಾಡೊಂದು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.;
‘ಬ್ಯಾಕ್ ಬೆಂಚರ್ಸ್’ ಚಿತ್ರದಿಂದ ಹೋಳಿ ಹಬ್ಬಕ್ಕಾಗಿ ಸುಮಧುರ ಹಾಡೊಂದು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.
ಹೃದಯಶಿವ ಅವರು ಬರೆದಿರುವ ಈ ಹಾಡನ್ನು ಭಾರತದ ಹೆಸರಾಂತ ಗಾಯಕ ಶಂಕರ್ ಮಹದೇವನ್ ಹಾಡಿದ್ದಾರೆ. ನಕುಲ್ ಅಭಯಂಕರ್ ಸಂಗೀತ ನೀಡಿದ್ದಾರೆ. ಹೋಳಿಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
‘ಬ್ಯಾಕ್ ಬೆಂಚರ್ಸ್’ ಚಿತ್ರ ನಮ್ಮ ಕಾಲೇಜು ದಿನಗಳನ್ನು ನೆನಪಿಸುತ್ತದೆ. ಈ ಚಿತ್ರದಲ್ಲಿ ಬಹುತೇಕ ಹೊಸ ಪ್ರತಿಭೆಗಳು ಅಭಿನಯಿಸಿದ್ದಾರೆ. ಆಡಿಷನ್ ಮೂಲಕ ಆಯ್ಕೆಯಾದ ಈ ಕಲಾವಿದರಿಗೆ ಸುಮಾರು ಒಂದು ವರ್ಷಗಳ ಕಾಲ ವರ್ಕ್ ಶಾಪ್ ನಡೆಸಿ ಆನಂತರ ಚಿತ್ರೀಕರಣ ಮಾಡಲಾಗಿದೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಬಿ.ಆರ್ ರಾಜಶೇಖರ್ ತಿಳಿಸಿದ್ದಾರೆ.
ಮನೊಹರ್ ಜೋಶಿ ಅವರ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ರಂಜನ್ ನರಸಿಂಹಮೂರ್ತಿ, ಜಿತಿನ್ ಆರ್ಯನ್, ಆಕಾಶ್, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳಿಕರ್, ಮಾನ್ಯ ಗೌಡ, ಕುಂಕುಮ್, ಅನುಷ ಸುರೇಶ್ ಮುಂತಾದವರಿದ್ದಾರೆ. ಪಿ.ಪಿ.ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮ್ಯ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ.