ʼಹುಯ್ಯೋ ಹುಯ್ಯೋʼ ಮಳೆರಾಯ ಹಾಡು ಬಿಡುಗಡೆ

Update: 2024-03-25 14:03 GMT
ಹುಯ್ಯೋ ಹುಯ್ಯೋ ಮಳೆರಾಯ ಹಾಡು ಬಿಡುಗಡೆ
Click the Play button to listen to article

ಕಿರಣ್ ರಾಜ್ ಅಭಿನಯದ 'ಭರ್ಜರಿ ಗಂಡುʼ ಚಿತ್ರದಿಂದ ಬಿಡುಗಡೆಯಾಯಿತು ಮತ್ತೊಂದು ಸುಮಧುರ ಹಾಡು.

ಕಿರುತೆರೆ ಲೋಕದಲ್ಲಿ ತಮ್ಮದೇ ಅದ ಛಾಪು ಮೂಡಿಸಿರುವ ಕಿರಣ್ ರಾಜ್ ಅಭಿನಯದ ಚಿತ್ರ ಭರ್ಜರಿ ಗಂಡು ಚಿತ್ರದ "ಹುಯ್ಯೋ ಹುಯ್ಯೋ ಮಳೆರಾಯ" ಹಾಡು ರಿಲೀಸ್‌ ಆಗಿದೆ.

ಡಾ. ವಿ ನಾಗೇಂದ್ರ ಪ್ರಸಾದ್ ಈ ಹಾಡನ್ನು ಬರೆದಿದ್ದು, ಖ್ಯಾತ ಗಾಯಕ ರಘು ದೀಕ್ಷಿತ್ ಹಾಡಿದ್ದಾರೆ. ಗುಮ್ಮಿನೇನಿ ವಿಜಯ್ ಸಂಗೀತ ನೀಡಿರುವ ಈ ಹಾಡಿಗೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ʼಎಲ್ಲಾ ಕಡೆ ಬಿಸಿಲು ಹೆಚ್ಚಾಗಿದ್ದು‌, ನೀರಿನ ಬವಣೆ ಹೆಚ್ಚಿದೆ. ಈ ಸಂದರ್ಭದಲ್ಲಿ ಉತ್ತಮ ಮಳೆಯಾಗಿ ನೀರಿನ ಬವಣೆ ದೂರವಾಗಲಿʼ ಎಂದು ಚಿತ್ರದ ನಾಯಕ ಕಿರಣ್ ರಾಜ್ ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವರ ಬಳಿ ವಿಶೇಷ ಪ್ರಾರ್ಥನೆ ಮಾಡಿದ್ದಾರೆ.

ಟೀಸರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ʼಭರ್ಜರಿ ಗಂಡುʼ ಏಪ್ರಿಲ್ 5 ಕ್ಕೆ ಚಿತ್ರಮಂದಿರಗಳಿಗೆ ಬರಲಿದೆ.

ಪ್ರಸಿದ್ದ್ ಸಿನಿಮಾಸ್, ಮದನ್ ಗೌಡ ಹಾಗೂ ಅನಿಲ್ ಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಗುಮ್ಮಿನೇನಿ‌ ವಿಜಯ್ ಸಂಗೀತ ಸಂಯೋಜನೆ, ಕಿಟ್ಟಿ ಕೌಶಿಕ್ ಛಾಯಾಗ್ರಹಣ ಹಾಗೂ ವೆಂಕಿ ಯುಡಿವಿ ಸಂಕಲನವಿರುವ ಈ‌ ಚಿತ್ರಕ್ಕೆ ಮಳವಳ್ಳಿ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ.

ಕಿರಣ್ ರಾಜ್ ಅವರಿಗೆ ನಾಯಕಿಯಾಗಿ ಯಶಾ ಶಿವಕುಮಾರ್ ಇದ್ದಾರೆ. ರಮೇಶ್ ಭಟ್ , ರಾಕೇಶ್ ರಾಜ್, ಸುರೇಖ, ವೀಣಾ ಸುಂದರ್, ಜಯಶ್ರೀ, ನಾಗೇಶ್ ರೋಹಿತ್ ನಾಗೇಶ್, ಸೌರಭ್ ಕುಲಕರ್ಣಿ, ಮಡೆನೂರು ಮನು, ಗೋವಿಂದೇ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Tags:    

Similar News