ಬಾಕ್ಸ್ ಆಫೀಸ್ ದಾಖಲೆ ಬರೆದ 'ಕಲ್ಕಿ'; ಮೊದಲ ದಿನವೇ 191.5 ಕೋಟಿ ಕಲೆಕ್ಷನ್ಸ್
ಕಲ್ಕಿ 2898 AD ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದ್ದು, ಬಿಡುಗಡೆಯಾದ ಮೊದಲ ದಿನವೇ 191.5 ಕೋಟಿ ರೂಪಾಯಿ ಗಳಿಸಿದೆ ಎಂದು ಚಿತ್ರ ನಿರ್ಮಾಪಕರು ಶುಕ್ರವಾರ ತಿಳಿಸಿದ್ದಾರೆ.;
ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 AD ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದ್ದು, ಬಿಡುಗಡೆಯಾದ ಮೊದಲ ದಿನವೇ 191.5 ಕೋಟಿ ರೂಪಾಯಿ ಗಳಿಸಿದೆ ಎಂದು ಚಿತ್ರ ನಿರ್ಮಾಪಕರು ಶುಕ್ರವಾರ ತಿಳಿಸಿದ್ದಾರೆ.
ಹಿಂದೂ ಮಹಾಕಾವ್ಯ ಮಹಾಭಾರತ ಮತ್ತು ವೈಜ್ಞಾನಿಕ ಕಾಲ್ಪನಿಕ ಕಥೆಯನ್ನಿಟ್ಟುಕೊಂಡ ಅದ್ಭುತ ಗ್ರಾಫಿಕ್ಸ್, ಸಾಹಸ ದೃಶ್ಯಗಳು ಪ್ರೇಕ್ಷಕರನ್ನು ಮೋಡಿ ಮಾಡಿವೆ.
ವೈಜಯಂತಿ ಮೂವೀಸ್ ನಿರ್ಮಿಸಿದ ದೊಡ್ಡ ಬಜೆಟ್ ನ ಈ ಚಿತ್ರದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಸೇರಿ ಸ್ಟಾರ್ ಕಲಾವಿದರ ದಂಡೇ ಇದೆ. ಇದರ ಜೊತೆಗೆ ಅನೇಕ ಸೆಲೆಬ್ರಿಟಿಗಳು ಅತಿಥಿ ಪಾತ್ರ ಮಾಡಿದ್ದಾರೆ.
ಕಲ್ಕಿ ಚಿತ್ರ ಗುರುವಾರ ಆರು ಭಾಷೆಗಳಲ್ಲಿ, ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಬಿಡುಗಡೆಯಾಗಿದೆ.
ವೈಜಯಂತಿ ಮೂವೀಸ್ ತನ್ನ ಅಧಿಕೃತ X ಪುಟದಲ್ಲಿ ಚಿತ್ರದ ಆರಂಭಿಕ ದಿನದ ಗಳಿಕೆಯನ್ನು ಕಲ್ಕಿ 2898 AD ಒಟ್ಟು ಬಾಕ್ಸ್ ಆಫೀಸ್ ಕಲೆಕ್ಷನ್ಸ್(GBOC)ನಲ್ಲಿ 191.5 ಕೋಟಿ ರೂ. ಗಳಿಸಿದೆ ಎಂದು ಪೋಸ್ಟರ್ ಮೂಲಕ ಹಂಚಿಕೊಂಡಿದೆ.
ಕಲ್ಚಿ ಚಿತ್ರ ಮೊದಲ ದಿನದ ಗಳಿಕೆಯಲ್ಲಿ ಬಾಹುಬಲಿ, ಆರ್‌ಆರ್‌ಆರ್ ಸಿನಿಮಾಗಳ ಬಳಿಕ ಉತ್ತಮ ಆರಂಭ ಪಡೆದ ಮೂರನೇ ಭಾರತೀಯ ಸಿನಿಮಾವೆಂಬ ಖ್ಯಾತಿಗೆ ಪಾತ್ರವಾಗಿದೆ.
ಎಸ್‌ಎಸ್ ರಾಜಮೌಳಿ ಅವರ ಆರ್‌ಆರ್‌ಆರ್ ಚಿತ್ರ ಮೊದಲ ದಿನ 223 ಕೋಟಿ ರೂ. ಗಳಿಸಿತ್ತು ಮತ್ತು ಬಾಹುಬಲಿ 2 ಮೊದಲ ದಿನ 217 ಕೋಟಿ ರೂ. ಗಳಿಸಿತ್ತು.