ಕಂಗನಾ ರನೌತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ರಿಲೀಸ್‌ಗೆ ಡೇಟ್ ಫಿಕ್ಸ್
‘ಎಮರ್ಜೆನ್ಸಿ’ ಸಿನಿಮಾ ಸೆಪ್ಟಂಬರ್ 6 ರಂದು ತೆರೆಗೆ ಬರಲಿದ್ದು, ಸಿನಿಮಾದಲ್ಲಿ ಕಂಗನಾ, ಇಂದಿರಾ ಗಾಂಧಿಯ ಪಾತ್ರದಲ್ಲಿ ನಟಿಸಿದ್ದಾರೆ.;
ನಟಿ, ನಿರ್ದೇಶಕಿ ಕಂಗನಾ ರನೌತ್ ಈಗ ಬಿಜೆಪಿ ಸಂಸದೆಯಾಗಿದ್ದಾರೆ. ಕಂಗನಾ ಚುನಾವಣೆಗೆ ಸ್ಪರ್ಧಿಸುವ ಮುಂಚೆ ಇಂದಿರಾ ಗಾಂಧಿ ಕುರಿತಾದ ‘ಎಮರ್ಜೆನ್ಸಿ’ ಸಿನಿಮಾದಲ್ಲಿ ನಟಿಸಿದ್ದರು. ಚುನಾವಣೆ ಕಾರಣಕ್ಕೆ ಈ ಸಿನಿಮಾದ ಬಿಡುಗಡೆ ಮುಂದೂಡಲಾಗಿತ್ತು, ಇದೀಗ ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಿದ್ದಾರೆ.
‘ಎಮರ್ಜೆನ್ಸಿ’ ಸಿನಿಮಾ ಸೆಪ್ಟಂಬರ್ 6 ರಂದು ತೆರೆಗೆ ಬರಲಿದ್ದು, ಸಿನಿಮಾದಲ್ಲಿ ಕಂಗನಾ, ಇಂದಿರಾ ಗಾಂಧಿಯ ಪಾತ್ರದಲ್ಲಿ ನಟಿಸಿದ್ದಾರೆ.
ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಿ ಟ್ವೀಟ್ ಮಾಡಿರುವ ಕಂಗನಾ ರನೌತ್, ‘ಭಾರತ ಪ್ರಭಾಪ್ರಭುತ್ವದ ಕರಾಳ ಅಧ್ಯಾಯಕ್ಕೆ ಐವತ್ತು ವರ್ಷವಾದ ಹಿನ್ನೆಲೆಯಲ್ಲಿ ‘ಎಮರ್ಜೆನ್ಸಿ’ ಸಿನಿಮಾದ ಬಿಡುಗಡೆ ಘೋಷಿಸುತ್ತಿದ್ದೇನೆ. ಸ್ವಾತಂತ್ರ್ಯ ಭಾರತದ ಅತ್ಯಂತ ವಿವಾದಾತ್ಮಕ ನಿರ್ಣಯದ ಮೇಲೆ ಬೆಳಕು ಚೆಲ್ಲುವ ಪ್ರಯತ್ನ’ ಎಂದು ಕಂಗನಾ ರನೌತ್ ಬರೆದುಕೊಂಡಿದ್ದಾರೆ.
ಚಿತ್ರದಲ್ಲಿ ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಡೆ, ವಿಶಾಖ್ ನಾಯರ್ ಸೇರಿದಂತೆ ಹಲವು ಕಲಾವಿದರು ಕಾಣಿಸಿಕೊಂಡಿದ್ದಾರೆ. ಜೀ ಸ್ಟುಡಿಯೋ ಮತ್ತು ಕಂಗಾನ ಅವರ ಮಣಿಕರ್ಣಿಕಾ ಫಿಲ್ಡ್ಂ ಚಿತ್ರವನ್ನು ನಿರ್ಮಾಣ ಮಾಡಿದೆ.
ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆಯಾಗಿ ಕಂಗನಾ ಸೋಮವಾರ (ಜೂನ್ 24) ಪ್ರಮಾಣ ವಚನ ಸ್ವೀಕರಿಸಿದ್ದಾರೆ.