ಕಾಂತಾರ 1 ಶೂಟಿಂಗ್ ಮುಕ್ತಾಯ! ಮೇಕಿಂಗ್ ಫಸ್ಟ್ ಗ್ಲಿಂಪ್ಸ್ ರಿಲೀಸ್ ಮಾಡಿದ ಹೊಂಬಾಳೆ ಫಿಲ್ಮ್ಸ್

3 ವರ್ಷಗಳ ಕಾಲ ರಿಷಬ್ ಹಾಗೂ ತಂಡ ‘ಕಾಂತಾರ: ಚಾಪ್ಟರ್ 1’ ಕೆಲಸದಲ್ಲಿ ತೊಡಗಿಕೊಂಡಿತ್ತು. ಅಷ್ಟೇ ಅಲ್ಲ, 250 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ.;

Update: 2025-07-21 10:38 GMT

ಕಾಂತಾರ 1 ಶೂಟಿಂಗ್ ಮುಕ್ತಾಯಗೊಂಡಿದೆ. 

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ: ಚಾಪ್ಟರ್ 1’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಈ ಚಿತ್ರಕ್ಕೆ ಬರೋಬ್ಬರಿ 250 ದಿನಗಳ ಕಾಲ ಶೂಟಿಂಗ್ ನಡೆದಿದೆ. ಅಕ್ಟೋಬರ್ 2ರಂದು ಸಿನಿಮಾ ತೆರೆಗೆ ಬರಲಿದೆ.

ಈ ಬಗ್ಗೆ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ತನ್ನ ಯೂಟ್ಯೂಬ್ ಚಾನೆಲ್​ನಲ್ಲಿ ವಿಡಿಯೋವೊಂದನ್ನು ಬಿಡುಗಡೆ ಮಾಡುವ ಮೂಲಕ ಈ ವಿಚಾರವನ್ನು ಅಧಿಕೃತ ಮಾಡಿದೆ. 

Full View

3 ವರ್ಷಗಳ ಕಾಲ ರಿಷಬ್ ಹಾಗೂ ತಂಡ ‘ಕಾಂತಾರ: ಚಾಪ್ಟರ್ 1’ ಕೆಲಸದಲ್ಲಿ ತೊಡಗಿಕೊಂಡಿತ್ತು. ಅಷ್ಟೇ ಅಲ್ಲ, 250 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಸಾವಿರಾರು ಸಿಬ್ಬಂದಿ ಹಗಲಿರುಳು ದುಡಿದಿದ್ದಾರೆ. ಮೇಕಿಂಗ್ ವಿಡಿಯೋ ಮೂಲಕ ಚಿತ್ರ ಹೇಗಿರಲಿದೆ ಎಂಬುವುದನ್ನು ತಿಳಿಸಿಕೊಟ್ಟಿದೆ. 

ಕಾಂತಾರ ಸಿನಿಮಾಗೆ ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಅರವಿಂದ್ ಕಶ್ಯಪ್ ಛಾಯಾಗ್ರಾಹಣ, ವಿನೇಶ್ ಬಂಗ್ಲನ್ ಪ್ರೊಡಕ್ಷನ್ ಡಿಸೈನ್ ಚಿತ್ರಕ್ಕೆ ಇದೆ. ಈ ಚಿತ್ರದ ಪಾತ್ರವರ್ಗದ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಇಲ್ಲ.

ಅಕ್ಟೋಬರ್ 2 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿರುವ ಈ ಸಿನಿಮಾ ಕನ್ನಡ, ತೆಲುಗು, ಹಿಂದಿ, ಮಲಯಾಳಂ, ತಮಿಳು, ಬೆಂಗಾಲಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ತೆರೆ ಕಾಣಲಿದೆ. 

Tags:    

Similar News