ʼಕಾಂತಾರ; ಅಧ್ಯಾಯ 1' ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

ರಿಷಭ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ಕಾಂತಾರ ಚಾಪ್ಟರ್ 1 ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಅಕ್ಟೋಬರ್ 2, 2025 ರಂದು ಈ ಸಿನಿಮಾ ತೆರೆಗೆ ಬರಲಿದೆ ಎಂದು ಚಿತ್ರತಂಡ ಘೋಷಿಸಿದೆ;

Update: 2024-11-19 10:54 GMT
'ಕಾಂತಾರ - ಚಾಪ್ಟರ್ 1' ಸಿನಿಮಾ ಬಿಡುಗಡೆಗೆ ದಿನಾಂಕ ಘೋಷಣೆಯಾಗಿದೆ.
Click the Play button to listen to article

ರಿಷಭ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ʼಕಾಂತಾರ ಚಾಪ್ಟರ್ ೧ʼ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಅಕ್ಟೋಬರ್ 2, 2025 ರಂದು ಈ ಸಿನಿಮಾ ತೆರೆಗೆ ಬರಲಿದೆ ಎಂದು ಚಿತ್ರತಂಡ ಘೋಷಿಸಿದೆ. 

ಕಾಂತಾರ ಕನ್ನಡ ಚಿತ್ರರಂಗದ ಅತ್ಯಂತ ಯಶಸ್ವಿ ಚಿತ್ರ. ರಿಷಬ್ ಶೆಟ್ಟಿ‌ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ದೊಡ್ಡ ಹಿಟ್​ ಆಗಿತ್ತು. ದೇಶಾದ್ಯಂತ ಭಾರೀ ಪ್ರದರ್ಶನ ಕಂಡು, ಇಡೀ ಭಾರತೀಯ ಚಿತ್ರರಂಗ ಕನ್ನಡ ಸಿನಿಮಾ ರಂಗದ ಕಡೆ ತಿರುಗಿ ನೋಡುವಂತೆ ಮಾಡಿತ್ತು.

ಇದೀಗ ʼಕಾಂತಾರ ಚಾಪ್ಟರ್ 1ʼ ತಂಡದಿಂದ ಹೊಸ ಅಪ್ಡೇಟ್​ ಸಿಕ್ಕಿದೆ. ʼಕಾಂತಾರ ಚಾಪ್ಟರ್ 1ʼ ಸಿನಿಮಾ ಮುಂದಿನ ವರ್ಷ; ಅಂದರೆ ಅಕ್ಟೋಬರ್​ 2 ಗಾಂಧಿ ಜಯಂತಿಯಂದು ರಿಲೀಸ್​ ಆಗುತ್ತಿದೆ. ಈ ಬಗ್ಗೆ ಹೊಂಬಾಳೆ ಫಿಲಂಸ್ ಅಧಿಕೃತ ಘೋಷಣೆ ಮಾಡಿದೆ. ಈಗಾಗಲೇ ಕೇವಲ ಕಾಂತಾರ ಚಾಪ್ಟರ್ 1 ಸಿನಿಮಾದ ಪೋಸ್ಟರ್ ನೋಡಿದ ಅಭಿಮಾನಿಗಳು ಚಿತ್ರದ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಕಾಂತಾರ ಚಾಪ್ಟರ್ 1 ಸಿನಿಮಾ ಏಳು ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಕನ್ನಡ ಸೇರಿ, ತಮಿಳು, ತೆಲುಗು, ಹಿಂದಿ, ಮಲಯಾಳಂ, ಬೆಂಗಾಳಿ ಹಾಗೂ ಇಂಗ್ಲೀಷ್​​ನಲ್ಲೂ ರಿಲೀಸ್ ಮಾಡುವ ನಿರ್ಧಾರವಾಗಿದೆ.

ರಿಷಬ್​ ಶೆಟ್ಟಿ ನಾಯಕ ನಟ ಹಾಗೂ ನಿರ್ದೇಶನದ ಚಿತ್ರವನ್ನು ಕುಂದಾಪುರದಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಕಾಂತಾರ ಕಥೆಯು ಕರ್ನಾಟಕದ ದಕ್ಷಿಣ ಕರಾವಳಿಯ ಕಾಡುಬೆಟ್ಟು ಕಾಡಿನಲ್ಲಿ ವಾಸಿಸುವ ಒಂದು ಸಣ್ಣ ಸಮುದಾಯದ ಸುತ್ತಲೂ ಇದೆ.

16 ಕೋಟಿ ರೂಪಾಯಿ ಬಜೆಟ್‌ನಲ್ಲಿ ತಯಾರಾದ ಕಾಂತಾರ ಪ್ರಪಂಚದಾದ್ಯಂತ 400 ಕೋಟಿ ರೂಪಾಯಿ ಗಳಿಸಿತ್ತು. 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ರಿಷಭ್ ಶೆಟ್ಟಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. 

ರಿಷಬ್ ಶೆಟ್ಟಿ, ಮಲಯಾಳಂ ನಟ ಜಯರಾಮ್‌ ಹೊರತಾಗಿ ಈ ಸಿನಿಮಾದಲ್ಲಿ ಯಾರೆಲ್ಲಾ ಇದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಅಲ್ಲದೆ, ತಾಂತ್ರಿಕ ವರ್ಗದಲ್ಲೂ ಯಾರೆಲ್ಲಾ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ಗುಟ್ಟಾಗಿ ಇಡಲಾಗಿದೆ.

Tags:    

Similar News