BiggBoss Kannada | ವಿದಾಯದ ಭಾವುಕ ಪೋಸ್ಟ್ ಶೇರ್ ಮಾಡಿದ ಕಿಚ್ಚ ಸುದೀಪ್
Bigg Boss| ಸದ್ಯ ಬಿಗ್‌ಬಾಸ್ ಮನೆಯಲ್ಲಿ ರಜತ್, ಭವ್ಯಾ ಗೌಡ, ಮೋಕ್ಷಿತಾ ಪೈ, ಹನುಮಂತು, ಉಗ್ರಂ ಮಂಜು ಹಾಗೂ ತ್ರಿವಿಕ್ರಮ್ ಇದ್ದಾರೆ.;
ಜನವರಿ 25 ಮತ್ತು ಜನವರಿ 26 ರಂದು ‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ನಡೆಯಲಿದ್ದು, ಬಿಗ್ ಬಾಸ್ ಕಾರ್ಯಕ್ರಮದ ಹೋಸ್ಟ್ ಆಗಿ ಕಿಚ್ಚ ಸುದೀಪ್ ನಡೆಸಿಕೊಡುವ ಕಟ್ಟ ಕಡೆಯ ಫಿನಾಲೆ ಇದಾಗಿದೆ. ಈ ಬಗ್ಗೆ ಕಿಚ್ಚ ಸುದೀಪ್ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.
ಕಿಚ್ಚ ಸುದೀಪ್ ತಮ್ಮ ʼಎಕ್ಸ್ʼ ಖಾತೆಯಲ್ಲಿ ಭಾವುಕ ಪೋಸ್ಟ್‌ವೊಂದನ್ನು ಶೇರ್ ಮಾಡಿದ್ದು, ‘’ಕಳೆದ 11 ಸೀಸನ್‌ಗಳಿಂದ ನಾನು ‘ಬಿಗ್ ಬಾಸ್’ ಕಾರ್ಯಕ್ರಮವನ್ನು ಖುಷಿಯಿಂದ ನಡೆಸಿಕೊಟ್ಟಿದ್ದೇನೆ. ನೀವೆಲ್ಲರೂ ತೋರಿದ ಪ್ರೀತಿಗೆ ನನ್ನ ತುಂಬು ಹೃದಯದ ಧನ್ಯವಾದಗಳು. ಹೋಸ್ಟ್ ಆಗಿ ನಾನು ನಡೆಸಿಕೊಡುವ ಕಡೆಯ ಫಿನಾಲೆ ಇದು. ನಿಮ್ಮೆಲ್ಲರಿಗೂ ಮನರಂಜನೆ ನೀಡಲು ನಾನು ನನ್ನ ಬೆಸ್ಟ್ ನೀಡುತ್ತೇನೆ. ಇದು ಖಂಡಿತವಾಗಿಯೂ ಅವಿಸ್ಮರಣೀಯ ಪಯಣ. ಈ ಕಾರ್ಯಕ್ರಮವನ್ನು ನನ್ನ ಕೈಲಾದಷ್ಟು ಅತ್ಯುತ್ತಮವಾಗಿ ನಿಭಾಯಿಸಿದ್ದಕ್ಕೆ ನನಗೆ ಖುಷಿಯಿದೆ. ಈ ಅವಕಾಶ ಕೊಟ್ಟ ಕಲರ್ಸ್ ಕನ್ನಡ ವಾಹಿನಿಗೆ ನನ್ನ ಧನ್ಯವಾದಗಳು’’ ಎಂದು ಪೋಸ್ಟ್ ಮಾಡಿದ್ದಾರೆ.
ಸದ್ಯ ಬಿಗ್‌ಬಾಸ್ ಮನೆಯಲ್ಲಿ ರಜತ್, ಭವ್ಯಾ ಗೌಡ, ಮೋಕ್ಷಿತಾ ಪೈ, ಹನುಮಂತು, ಉಗ್ರಂ ಮಂಜು ಹಾಗೂ ತ್ರಿವಿಕ್ರಮ್ ಇದ್ದಾರೆ. ಈ ಬಾರಿ ಯಾರು ಬಿಗ್‌ಬಾಸ್ ಟ್ರೋಫಿ ಗೆಲ್ಲಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.