ಕಿಚ್ಚ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾದ ಟೀಸರ್ ಬಿಡುಗಡೆ
ನಟ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಮ್ಯಾಕ್ಸ್’ ಸಿನಿಮಾದ ಟೀಸರ್ ಮಂಗಳವಾರ (ಜು.16) ಬಿಡುಗಡೆಯಾಗಿದೆ.;
ನಟ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಮ್ಯಾಕ್ಸ್’ ಸಿನಿಮಾದ ಟೀಸರ್ ಮಂಗಳವಾರ (ಜು.16) ಬಿಡುಗಡೆಯಾಗಿದೆ.
ಟೀಸರ್‌ನಲ್ಲಿ ಕಿಚ್ಚ ಸುದೀಪ್ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಬಾ ಬಾ ಬ್ಲ್ಯಾಕ್ ಶಿಪ್ ಹ್ಯಾವ್ ಯೂ ಎನಿ ಕ್ಲೂ ಎಂದು ಡೈಲಾಗ್ ಹೇಳುವ ಮೂಲಕ ಸುದೀಪ್ ಎಂಟ್ರಿ ಕೊಟ್ಟಿದ್ದಾರೆ.
ವಿಲನ್ ಪಾತ್ರದಲ್ಲಿ ತೆಲುಗು ನಟ ಸುನೀಲ್ ಕಾಣಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಯಾಗಿ ತಮಿಳು ನಟಿ ವರಲಕ್ಷ್ಮಿ ಶರತ್‌ಕುಮಾರ್ ಕಾಣಿಸಿಕೊಂಡಿದ್ದಾರೆ.
'ವಿಕ್ರಾಂತ್ ರೋಣ' ಸಿನಿಮಾದ ಬಳಿಕ 2 ವರ್ಷಗಳ ಬಳಿಕ 'ಮ್ಯಾಕ್ಸ್' ಸಿನಿಮಾ ತೆರೆಗೆ ಬರುತ್ತಿದೆ. ಹೀಗಾಗಿ ಟೀಸರ್ ನೋಡಿದ ಮೇಲೆ ಮತ್ತಷ್ಟು ಕುತೂಹಲ ಮೂಡಿದೆ.
‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಜೊತೆಗೆ ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ ಇನ್ನಿತರರು ನಟಿಸಿದ್ದಾರೆ. ‘ಮ್ಯಾಕ್ಸ್’ ಸಿನಿಮಾವನ್ನು ವಿಜಯ್ ಕಾರ್ತಿಕೇಯ ನಿರ್ದೇಶನ ಮಾಡಿದ್ದಾರೆ. ತಮಿಳಿನ ಯಶಸ್ವಿ ನಿರ್ಮಾಪಕ ಕಲೈಪುಲಿ ಎಸ್ ತನು ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಿನಿಮಾದ ಬಿಡುಗಡೆ ದಿನಾಂಕದ ಘೋಷಣೆ ಮಾಡಿಲ್ಲವಾದರೂ ಆದಷ್ಟೂ ಬೇಗ ಚಿತ್ರಮಂದಿರಕ್ಕೆ ಬರುವುದಾಗಿ ಹೇಳಿದ್ದಾರೆ.