ನಟ ಮಿಥುನ್ ಚಕ್ರವರ್ತಿ ಆಸ್ಪತ್ರೆಗೆ ದಾಖಲು
ನಟ ಮಿಥುನ್ ಚಕ್ರವರ್ತಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.;
By : The Federal
Update: 2024-02-11 05:56 GMT
ಕೋಲ್ಕತ್ತಾ: ಬಾಲಿವುಡ್ ಹಿರಿಯ ನಟ ಮತ್ತು ಹಿರಿಯ ರಾಜಕಾರಣಿ ಮಿಥುನ್ ಚಕ್ರವರ್ತಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ನಟನಿಗೆ ಬೆಳಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಬೆಳಗ್ಗೆ 10.30ರ ಸುಮಾರಿಗೆ ಆಸ್ಪತ್ರೆಗೆ ಕರೆತರಲಾಗಿದೆ. ಪ್ರಸ್ತುತ ಅವರನ್ನು ಎಂ ಐ ಆರ್‌ಗೆ ಒಳಪಡಿಸಲಾಗಿದ್ದು, ಇತರ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.
ನಟ ಪ್ರಸ್ತುತ ನ್ಯೂರೋಮೆಡಿಸಿನ್ ತಜ್ಞರ ಮೇಲ್ವಿಚಾರಣೆಯಲ್ಲಿ ಐಟಿಯುನಲ್ಲಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಪಿಟಿಐಗೆ ತಿಳಿಸಿದ್ದಾರೆ.