ಲೈನ್‌ಮ್ಯಾನ್ ಸಿನಿಮಾ ರಿಲೀಸ್‌ಗೆ ಡೇಟ್ ಫಿಕ್ಸ್
ನಿರ್ದೇಶಕ ರಘು ವಿ ಶಾಸ್ತ್ರಿ ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಲೈನ್‌ಮ್ಯಾನ್ ಸಿನಿಮಾ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಬಿಡುಗಡೆಗೊಳ್ಳಲಿದೆ.;
ಚಿತ್ರದ ಪೋಸ್ಟರ್ ರಿಲೀಸ್ ಮಾಡಿ ಈಗಾಗಲೇ ನಿರೀಕ್ಷೆ ಹುಟ್ಟಿಸಿರುವ 'ಲೈನ್‌ಮ್ಯಾನ್' ಸಿನಿಮಾ ಮಾ.15ಕ್ಕೆ ಬಿಡುಗಡೆ ಆಗಲಿದೆ.
ನಿರ್ದೇಶಕ ರಘು ವಿ ಶಾಸ್ತ್ರಿ ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಲೈನ್‌ಮ್ಯಾನ್ ಸಿನಿಮಾ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಬಿಡುಗಡೆಗೊಳ್ಳಲಿದೆ. ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿಯೂ ಸಹ ‘ಲೈನ್ ಮ್ಯಾನ್’ ಸಿನಿಮಾ ಪ್ರದರ್ಶನಗೊಳ್ಳುತ್ತಿದೆ.
ಯುವ ನಟ ತ್ರಿಗುಣ್, ಲೈನ್ ಮ್ಯಾನ್ ಪಾತ್ರದಲ್ಲಿ ನಟಿಸಿದ್ದಾರೆ. ಕಾಜಲ್ ಕುಂದರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಹಿರಿಯ ನಟಿ ಬಿ ಜಯಶ್ರೀ, ಮೈಕೋ ನಾಗರಾಜ್, ಹರಿಣಿ, ಅಂಜಲಿ, ಅಪೂರ್ವಶ್ರೀ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.
'ಭಿನ್ನ’, ‘ಡಿಯರ್ ಸತ್ಯ’ ಸಿನಿಮಾಗಳನ್ನು ನಿರ್ಮಿಸಿರುವ ಪರ್ಪಲ್ ರಾಕ್ ಸಂಸ್ಥೆಯ ಮೂರನೇ ಸಿನಿಮಾ ಇದಾಗಿದೆ. ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ ಅಜಯ್ ಅಪರೂಪ್ ಸೇರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ಸಂಯೋಜಿಸಿದ್ದು, ಶಾಂತಿ ಸಾಗರ್ ಅವರ ಛಾಯಾಗ್ರಹಣವಿದೆ.