ಈ ಬಾರಿಯ ಚುನಾವಣೆಯಲ್ಲಿ ಸುದೀಪ್ ಯಾರ ಪರ ಪ್ರಚಾರ ಮಾಡ್ತಾರೆ?
ಕಳೆದ ಬಾರಿ ಯಾರಿಗಾಗಿ, ಯಾವ ಕಾರಣಕ್ಕಾಗಿ ಪ್ರಚಾರಕ್ಕೆ ಹೋಗಿದ್ದೆ ಎಂಬುದನ್ನು ನಾನು ಸ್ಪಷ್ಟಪಡಿಸಿದ್ದೆ. ಈ ಬಾರಿ ಇನ್ನೂ ಸಹ ಯಾರೂ ನನ್ನನ್ನು ಪ್ರಚಾರಕ್ಕಾಗಿ ಕೇಳಿಲ್ಲ. ಕೇಳಿದಾಗ ಆ ಬಗ್ಗೆ ನಿರ್ಣಯ ಮಾಡುತ್ತೇನೆ’ ಎಂದಿದ್ದಾರೆ.;
ಲೋಕಸಭೆ ಚುನಾವಣೆಯ ಹಿನ್ನೆಲೆ ನಟ ಸುದೀಪ್ ಅವರು ಈ ಬಾರಿ ಯಾವ ಅಭ್ಯರ್ಥಿ ಪರ ಅಥವಾ ಯಾವ ಪಕ್ಷದ ಪರವಾಗಿ ಪ್ರಚಾರ ಮಾಡಲಿದ್ದಾರೆ ಎಂಬ ಕುತೂಹಲ ಇತ್ತು. ಈ ಪ್ರಶ್ನೆಗೆ ಸುದೀಪ್ ಪ್ರತಿಕ್ರಿಯಿಸಿದ್ದಾರೆ.
ಕ್ರಿಕೆಟ್ ಟೀಂ ಮೇಟ್, ನಟ, ಕಿರಿಯ ಮಿತ್ರ ಚಂದನ್ರ ಹೊಸ ಹೋಟೆಲ್ ಉದ್ಘಾಟನೆಗೆ ಆಗಮಿಸಿದ್ದ ಸುದೀಪ್, ಈ ಬಗ್ಗೆ ಮಾತನಾಡಿದ್ದು, ‘ಕಳೆದ ಬಾರಿ ಯಾರಿಗಾಗಿ, ಯಾವ ಕಾರಣಕ್ಕಾಗಿ ಪ್ರಚಾರಕ್ಕೆ ಹೋಗಿದ್ದೆ ಎಂಬುದನ್ನು ನಾನು ಸ್ಪಷ್ಟಪಡಿಸಿದ್ದೆ. ಈ ಬಾರಿ ಇನ್ನೂ ಸಹ ಯಾರೂ ನನ್ನನ್ನು ಪ್ರಚಾರಕ್ಕಾಗಿ ಕೇಳಿಲ್ಲ. ಕೇಳಿದಾಗ ಆ ಬಗ್ಗೆ ನಿರ್ಣಯ ಮಾಡುತ್ತೇನೆ’ ಎಂದು ಸುದೀಪ್ ಉತ್ತರಿಸಿದ್ದಾರೆ.
‘ಸಿನಿಮಾ ಬಿಟ್ಟು ಕ್ರಿಕೆಟ್ನಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಈಗಾಗಲೇ ಅಭಿಮಾನಿಗಳು, ಗೆಳೆಯರು ಗಲಾಟೆ ಮಾಡುತ್ತಿದ್ದಾರೆ. ಇಂಥಹಾ ಸಮಯದಲ್ಲಿ ಶೂಟಿಂಗ್ ಬಿಟ್ಟು ರಾಜಕೀಯ ಪ್ರಚಾರಕ್ಕೆ ಹೋದರೆ ಇನ್ನಷ್ಟು ಗಲಾಟೆಗಳಾಗುತ್ತವೆಯೋ ಏನೋ’ ಎಂದು ತಮಾಷೆ ಮಾಡಿದರು.
ಕಿಚ್ಚ ಸುದೀಪ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಅಬ್ಬರದ ಪ್ರಚಾರ ಮಾಡಿದ್ದರು