ಶಿವ ಕಾರ್ತಿಕೇಯನ್ - ರುಕ್ಮಿಣಿ ವಸಂತ್ ನಟನೆಯ ಮದರಾಸಿ ಸಿನಿಮಾ ಸೆಪ್ಟೆಂಬರ್ 5ಕ್ಕೆ ಬಿಡುಗಡೆ

ಅಮರನ್ ಸಿನಿಮಾ ಬಳಿಕ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಿವ ಕಾರ್ತಿಕೇಯನ್, ಮದರಾಸಿ ಸಿನಿಮಾದ ಹುಕ್ ಸ್ಟೆಪ್‌ ಗೆ ಹೆಜ್ಜೆ ಹಾಕಿ ಅಭಿಮಾನಿಗಳ‌ ಜೊತೆ ಸಂಭ್ರಮಿಸಿದರು.;

Update: 2025-08-30 10:53 GMT

ಶಿವ ಕಾರ್ತಿಕೇಯನ್ - ರುಕ್ಮಿಣಿ ವಸಂತ್ 

ತಮಿಳು ಚಿತ್ರರಂಗದ ಖ್ಯಾತ ನಟ ಶಿವ ಕಾರ್ತಿಕೇಯನ್ ಹಾಗೂ ಕನ್ನಡದ ನಟಿ ರಕ್ಮಿಣಿ ವಸಂತ್  ನಾಯಕಿಯಾಗಿ ನಟಿಸಿರುವ ಮದರಾಸಿ ಸಿನಿಮಾ ಸೆಪ್ಟೆಂಬರ್ 5ರಂದು ಬಹುಭಾಷೆಯಲ್ಲಿ ಬಿಡುಗಡೆಯಾಗಲಿದೆ.

ಬೆಂಗಳೂರಿನ ಕೋರಮಂಗಲದ ನೆಕ್ಸಸ್ ಮಾಲ್‌ನಲ್ಲಿ ಹಮ್ಮಿಕೊಂಡಿದ್ದ ಸಿನಿಮಾ ಪ್ರಚಾರ ಕಾರ್ಯಕ್ರಮದಲ್ಲಿ ಚಿತ್ರತಂಡದ ಸದಸ್ಯರು ಭಾಗಿಯಾಗಿದ್ದರು. ಈ ವೇಳೆ ಕನ್ನಡ, ತೆಲುಗು, ತಮಿಳು ಸೇರಿದಂತೆ ಎಲ್ಲಾ ಭಾಷೆಗಳ ಟ್ರೇಲರ್ ಪ್ರದರ್ಶನ ಮಾಡಲಾಯಿತು. ಶಿವ ಕಾರ್ತಿಕೇಯನ್, ರುಕ್ಮಿಣಿ ವಸಂತ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Full View

ಅಮರನ್ ಸಿನಿಮಾ ಬಳಿಕ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಿವ ಕಾರ್ತಿಕೇಯನ್, ಮದರಾಸಿ ಸಿನಿಮಾದ ಹುಕ್ ಸ್ಟೆಪ್‌ ಗೆ ಹೆಜ್ಜೆ ಹಾಕಿ ಅಭಿಮಾನಿಗಳ‌ ಜೊತೆ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಟ ಶಿವ ಕಾರ್ತಿಕೇಯನ್, ರುಕ್ಮಿಣಿ ವಸಂತ್ ಅವರಂತಹ ನಟಿಯನ್ನು ತಮಿಳಿಗೆ ನೀಡಿದ ಬೆಂಗಳೂರಿಗೆ ಧನ್ಯವಾದಗಳು. ನನ್ನ ಹಿಂದಿನ ಚಿತ್ರಗಳಿಗೆ ತಾವುಗಳು ನಿರೀಕ್ಷೆಗೂ ಮೀರಿ ಯಶಸ್ಸನ್ನು ನೀಡಿದ್ದೀರಿ. ಈ ಚಿತ್ರಕ್ಕೂ ನಿಮ್ಮೆಲ್ಲರ ಪ್ರೋತ್ಸಾಹವಿರಲಿ. ನಿಮ್ಮ ಪ್ರೀತಿ, ಅಭಿಮಾನಕ್ಕೆ ನಾನು ಸದಾ ಋಣಿ. ಮದರಾಸಿ ಕಾಲ್ಪನಿಕ ಕಥೆ. ನಿರ್ದೇಶಕ ಮುರುಗದಾಸ್ ಅವರೆ ಕಥೆ ಬರೆದಿದ್ದಾರೆ. ಸೆಪ್ಟೆಂಬರ್ 5 ನಮ್ಮ ಸಿನಿಮಾ ಬಿಡುಗಡೆಯಾಗುತ್ತಿದೆ. ಈ ಸಿನಿಮಾವನ್ನು ಬೆಂಬಲಿಸಿ ಎಂದು ತಿಳಿಸಿದರು. 

ನಾಯಕಿ ರುಕ್ಮಿಣಿ ವಸಂತ್ ಮಾತನಾಡಿ, ಚಿತ್ರದಲ್ಲಿ ಒಳ್ಳೆಯ ಪಾತ್ರ ಸಿಕ್ಕಿದೆ. ಚಿತ್ರಕ್ಕೆ ಸಹಕಾರ ಬೆಂಬಲ ಇರಲಿ ಎಂದರು. ವಿಕೆ ಫಿಲಂಸ್ ಕರ್ನಾಟಕದಾದ್ಯಂತ ಈ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ. ಆರ್‌. ಮುರುಗದಾಸ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. 

Tags:    

Similar News