ಮಿಥುನ್ ಚಕ್ರವರ್ತಿ ಆರೋಗ್ಯದಲ್ಲಿ ಚೇತರಿಕೆ
ಬಾಲಿವುಡ್‌ನ ಖ್ಯಾತ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.;
By : The Federal
Update: 2024-02-12 10:29 GMT
ಕೊಲ್ಕತ್ತಾ: ಖ್ಯಾತ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ವೈದ್ಯಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಚಕ್ರವರ್ತಿ (73) ಅವರನ್ನು ಶನಿವಾರ ಇಲ್ಲಿನ ಕೊಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
"ನಟ ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಿದ್ದು, ಸಕ್ರಿಯರಾಗಿದ್ದಾರೆ. ಆಹಾರವನ್ನು ಸೇವಿಸುತ್ತಿದ್ದಾರೆ. ಸದ್ಯಕ್ಕೆ ಡಿರ್ಚಾರ್ಜ್ ಮಾಡುವ ಮೊದಲು ಕೆಲವು ಆರೋಗ್ಯ ತಪಾಸಣೆಯನ್ನು ನಡೆಸಲಾಗುವುದು" ಎಂದು ವೈದ್ಯಕೀಯ ಅಧಿಕಾರಿ ತಿಳಿಸಿದ್ದಾರೆ.
ನಟ ಈಗಾಗಲೇ ಆಸ್ಪತ್ರೆಯಲ್ಲಿ ಇತರ ವೈದ್ಯಕೀಯ ಪರೀಕ್ಷೆಗಳ ಜೊತೆಗೆ MRI ಗೆ ಒಳಗಾಗಿದ್ದಾರೆ.
ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಪದ್ಮಭೂಷಣʼ ಪ್ರಶಸ್ತಿಯನ್ನು ಪಡೆದಿರುವ ಚಕ್ರವರ್ತಿ ಹಿಂದಿ, ಬೆಂಗಾಲಿ, ಒಡಿಯಾ, ಭೋಜ್‌ಪುರಿ ಮತ್ತು ತಮಿಳು ಭಾಷೆಗಳಲ್ಲಿ ಸುಮಾರು 350 ಚಲನಚಿತ್ರಗಳಲ್ಲಿ ನಟಿಸಿದ್ದಾರೆ.