ಬಹು ನಿರೀಕ್ಷಿತ ಸಿನಿಮಾ 'ಕಲ್ಕಿ 2898 ಎಡಿ' ಟ್ರೈಲರ್ ಬಿಡುಗಡೆ
ಬಹು ನಿರೀಕ್ಷಿತ ಸಿನಿಮಾ 'ಕಲ್ಕಿ 2898 ಎಡಿ' ಟ್ರೈಲರ್ ಮಂಗಳವಾರ ರಿಲೀಸ್ ಆಗಿದೆ.;
ಬಹು ನಿರೀಕ್ಷಿತ ಸಿನಿಮಾ 'ಕಲ್ಕಿ 2898 ಎಡಿ' ಟ್ರೈಲರ್ ಮಂಗಳವಾರ ( ಜೂನ್ 11) ರಿಲೀಸ್ ಆಗಿದೆ. 'ಕಲ್ಕಿ 2898 AD' ಸಿನಿಮಾದ ಟ್ರೈಲರ್ ಅಮೆಜಾನ್ ಪ್ರೈಮ್‌ನಲ್ಲಿ ಬಿ&ಬಿ ಬುಜ್ಜಿ ಮತ್ತು ಭೈರವ ಮುನ್ನುಡಿ ರಿಲೀಸ್ ಆದ ಬಳಿಕ ಬಿಡುಗಡೆಯಾಗಿದೆ. ಕಳೆದ ಹಲವು ತಿಂಗಳಿನಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ವೈಜಯಂತಿ ಮೂವೀಸ್ ಬಿಗ್ ಸರ್ಪ್ರೈಸ್ ಕೊಟ್ಟಿದೆ. ಯೂಟ್ಯೂಬ್ ಚಾನಲ್‌ನಲ್ಲಿ ಈ ಸಿನಿಮಾದ ಟ್ರೈಲರ್ ರಿಲೀಸ್ ಮಾಡಲಾಗಿದೆ.
ವೈಜ್ಞಾನಿಕ ಕಾಲ್ಪನಿಕ ಮಹಾಕಾವ್ಯ 'ಕಲ್ಕಿ 2898 AD' ಚಿತ್ರದ ಎರಡು ನಿಮಿಷ ಮತ್ತು ಐವತ್ತೊಂದು ಸೆಕೆಂಡ್‌ಗಳ ಟ್ರೇಲರ್ ರಿಲೀಸ್ ಆಗಿದೆ. ವಿಎಫ್‌ಎಕ್ಸ್‌ನಿಂದಲೇ ನೋಡುಗರ ಗಮನ ಸೆಳೆದ ಈ ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಇದೀಗ ಟ್ರೇಲರ್ ಸಹ ಎಲ್ಲ ಭಾಷೆಗಳಲ್ಲೂ ಬಿಡುಗಡೆಯಾಗಿದೆ.
ಈ ಟ್ರೇಲರ್ ನೋಡಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈ ಟ್ರೇಲರ್‌ನಲ್ಲಿ ಕಮಲ್ ಹಾಸನ್ ಪ್ರಮುಖ ಹೈಲೈಟ್ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ. ಅಮಿತಾಬ್, ದೀಪಿಕಾ ಪಡುಕೋಣೆ ಪಾತ್ರಗಳೂ ಗಮನ ಸೆಳೆದಿವೆ.
ಇನ್ನು ಸಿನಿಮಾದ ಟ್ರೈಲರ್ ಬಗ್ಗೆ ನಿರ್ದೇಶಕ ನಾಗ್ ಅಶ್ವಿನ್, "ಇಂದು ನನ್ನ ಹೃದಯವು ಹಲವು ಮಿಕ್ಸ್‌ಡ್ ಭಾವನೆಗಳಿಂದ ತುಂಬಿದೆ. ಒಬ್ಬ ಚಲನಚಿತ್ರ ನಿರ್ದೇಶಕನಾಗಿ, ನಾನು ಯಾವಾಗಲೂ ಭಾರತೀಯ ಪುರಾಣ ಮತ್ತು ವೈಜ್ಞಾನಿಕ ಕಾದಂಬರಿಗಳಿಂದ ಆಕರ್ಷಿತನಾಗಿದ್ದೇನೆ. 'ಕಲ್ಕಿ 2898 AD' ಸಿನಿಮಾದಲ್ಲಿ ಈ ಎರಡು ಅಂಶಗಳನ್ನು ವಿಲೀನಗೊಳಿಸಿದ್ದೇವೆ. ನಮ್ಮ ಕಲಾವಿದರು ಮತ್ತು ತಂಡದ ಅಸಾಧಾರಣ ಪ್ರತಿಭೆ ಮತ್ತು ಸಮರ್ಪಣಾ ಮನೋಭಾವದಿಂದ ಕನಸೊಂದು ನನಸಾಗಿದೆ." ಎಂದು ಹೇಳಿಕೊಂಡಿದ್ದಾರೆ.
ಪ್ರಭಾಸ್, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಜೂನ್ 27ಕ್ಕೆ ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆಕಾಣಲಿದೆ.