ನೀನಾಸಂ ಸತೀಶ್- ರಚಿತಾ ರಾಮ್ ಜೋಡಿಯ ಬಹು ನಿರೀಕ್ಷಿತ ʼಮ್ಯಾಟ್ನಿʼ ಈ ವಾರ ತೆರೆಗೆ

ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ನಟಿಸಿರುವ ಬಹು ನಿರೀಕ್ಷಿತ ಸಿನಿಮಾ ʼಮ್ಯಾಟ್ನಿʼ ಚಿತ್ರ ಏ.5ರಂದು ತೆರೆ ಕಾಣಲಿದೆ.;

Update: 2024-04-03 05:46 GMT
ʼಮ್ಯಾಟ್ನಿʼ ಚಿತ್ರ ಏಪ್ರಿಲ್ 5ರಂದು ತೆರೆಕಾಣಲಿದೆ.
Click the Play button to listen to article

ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ನಟಿಸಿರುವ ಬಹು ನಿರೀಕ್ಷಿತ ಸಿನಿಮಾ ʼಮ್ಯಾಟ್ನಿʼ ಚಿತ್ರ ಏ.5ರಂದು ತೆರೆಕಾಣಲಿದೆ.

ಈಗಾಗಲೇ ಚಿತ್ರದ ಟೀಸರ್, ಟ್ರೇಲರ್ ಮತ್ತು ಹಾಡುಗಳು ಜನರ ಮನ ಗೆದ್ದಿದೆ.

F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ಪಾರ್ವತಿ ಎಸ್ ಗೌಡ ನಿರ್ಮಿಸಿರುವ ಹಾಗೂ ಮನೋಹರ್ ಕಾಂಪಲ್ಲಿ ನಿರ್ದೇಶನದ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ, ಸುಧಾಕರ್ ಎಸ್ ರಾಜ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನವಿದೆ.

ನೀನಾಸಂ ಸತೀಶ್, ರಚಿತಾ ರಾಮ್, ಅದಿತಿ ಪ್ರಭುದೇವ, ನಾಗಭೂಷಣ, ಶಿವರಾಜ ಕೆ.ಆರ್ ಪೇಟೆ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Tags:    

Similar News