ಮೇ 30ಕ್ಕೆ ಪ್ರೇಮಲೋಕ 2 ಶೂಟಿಂಗ್ ಆರಂಭ
ರವಿಚಂದ್ರನ್ ಅವರು ‘ಪ್ರೇಮಲೋಕ 2’ ಮಾಡಲು ಹೊರಟಿದ್ದಾರೆ. ಮೇ 30ಕ್ಕೆ ಪ್ರೇಮಲೋಕ 2 ಸಿನಿಮಾ ಶೂಟಿಂಗ್ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.;
By : The Federal
Update: 2024-03-04 11:35 GMT
ನಟ ರವಿಚಂದ್ರನ್ ಅವರೇ ನಿರ್ಮಾಣ ಮಾಡಿ, ನಟಿಸಿ, ನಿರ್ದೇಶನ ಮಾಡಿದ್ದ ಸಿನಿಮಾ ‘ಪ್ರೇಮಲೋಕ’ ಬಹಳಷ್ಟು ಖ್ಯಾತಿ ಗಳಿಸಿತ್ತು. ಇದೀಗ ಕನ್ನಡ ಸಿನಿಮಾ ರಂಗದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದ ಆ ಪ್ರೇಮಲೋಕ ಬಂದು ಸರಿಸುಮಾರು ನಾಲ್ಕು ದಶಕದ ಬಳಿಕ ರವಿಚಂದ್ರನ್ ಅವರು ‘ಪ್ರೇಮಲೋಕ 2’ ಮಾಡಲು ಹೊರಟಿದ್ದಾರೆ.
ಈ ಬಗ್ಗೆ ಕೊಪ್ಪಳದ ಕನಕಗಿರಿ ಉತ್ಸವದಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.‘ಮೇ 30ಕ್ಕೆ ಪ್ರೇಮಲೋಕ 2 ಸಿನಿಮಾ ಶುರುವಾಗುತ್ತದೆ. ದೊಡ್ಡ ಮಗ ಮನೋರಂಜನ್ ನಟಿಸುತ್ತಾನೆ. ಚಿಕ್ಕ ಮಗ ಚಿಕ್ಕ ಪಾತ್ರ ಮಾಡುತ್ತಾನೆ. ನಾನು ತಂದೆಯ ಪಾತ್ರ ಮಾಡುತ್ತೇನೆ. 20-25 ಹಾಡುಗಳು ಇರುತ್ತವೆ. ಎಲ್ಲಾ ವಯಸ್ಸಿನವರಿಗೂ ಸಿನಿಮಾ ಇಷ್ಟ ಆಗುತ್ತದೆ. ಸಿನಿಮಾದಲ್ಲಿ ಪ್ರೀತಿ ಮೆಲುಕು ಹಾಕುತ್ತಾ ಹೋಗುತ್ತೀರಾ. ಇಲ್ಲಿ ಜಾತಿ, ರಾಜಕೀಯದ ವಿಚಾರ ಇಲ್ಲ. ಕೇವಲ ಪ್ರೀತಿ ವಿಚಾರ ಇದೆ’ ಎಂದಿದ್ದಾರೆ. ಈ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.