'ಪುಷ್ಪ 2; ದಿ ರೂಲ್' ಮಾಸ್ ಟೀಸರ್ ರಿಲೀಸ್
ಪುಷ್ಪ 2: ದಿ ರೂಲ್' ಸಿನಿಮಾದ ಟೀಸರ್ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮಿಲಿಯನ್‌ಗಟ್ಟಲೇ ವೀವ್ಸ್ ಪಡೆದುಕೊಂಡಿದೆ.;
ಅಲ್ಲು ಅರ್ಜುನ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ 'ಪುಷ್ಪ 2: ದಿ ರೂಲ್' ಸಿನಿಮಾದ ಟೀಸರ್ ಸೋಮವಾರ ( ಏ. 8) ರಂದು ಬಿಡುಗಡೆ ಮಾಡಲಾಗಿದೆ. ಈ ಟೀಸರ್‌ನಲ್ಲಿ ಅಲ್ಲು ಅರ್ಜುನ್ ಅವರನ್ನು ಹೊಸ ರೀತಿಯಲ್ಲಿ ತೋರಿಸಲಾಗಿದೆ.
ಅಲ್ಲು ಅರ್ಜುನ್ ಅವರು ಮಹಿಳೆಯ ಗೆಟಪ್‌ನಲ್ಲಿ ಸೀರೆ ಧರಿಸಿ, ಕೊರಳಲ್ಲಿ ನಿಂಬೆ ಹಣ್ಣಿನ ಹಾರ ಮತ್ತು ಹೂವಿನ ಹಾರವನ್ನು ಹಾಕಿಕೊಂಡು, ಕಾಲಿಗೆ ಗಜ್ಜೆ ಹಾಕಿಕೊಂಡು ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ ಮತ್ತು ತ್ರಿಶೂಲ ಹಿಡಿದುಕೊಂಡು ಭರ್ಜರಿಯಾಗಿ ಫೈಟ್ ಮಾಡಿದ್ದಾರೆ. ಜಾತ್ರೆಯ ಬ್ಯಾಗ್ರೌಂಡ್‌ನಲ್ಲಿ ಈ ಟೀಸರ್ ಮೂಡಿಬಂದಿದೆ.
'ಪುಷ್ಪ 2: ದಿ ರೂಲ್' ಸಿನಿಮಾದ ಟೀಸರ್ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮಿಲಿಯನ್‌ಗಟ್ಟಲೇ ವೀವ್ಸ್ ಪಡೆದುಕೊಂಡಿದೆ. ಲಕ್ಷಾಂತರ ಮಂದಿ ಲೈಕ್ ಮಾಡಿದ್ದಾರೆ. ಪುಷ್ಪ 2 ಸಿನಿಮಾವು ಆಗಸ್ಟ್ 15ರಂದು ತೆರೆಕಾಣುತ್ತಿದೆ. ಅಲ್ಲು ಅರ್ಜುನ್‌ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದು, ಫಹಾದ್ ಫಾಸಿಲ್, ರಾವ್ ರಮೇಶ್, ಸುನಿಲ್, ಅನಸೂಯಾ ಭಾರದ್ವಾಜ್, ಡಾಲಿ ಧನಂಜಯ, ಜಗದೀಶ್ ಮುಂತಾದವರು ಅಭಿನಯಿಸಿದ್ದಾರೆ.
ತೆಲುಗು, ಕನ್ನಡ, ಹಿಂದಿ, ತಮಿಳು, ಮಲಯಾಳಂ, ಭೋಜಪುರಿ ಭಾಷೆಗಳಲ್ಲಿ ತೆರೆಕಾಣಲಿರುವ ಈ ಸಿನಿಮಾವನ್ನು ಸುಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ.