Pushpa 2 The Rule | ಪುಷ್ಪ-2 ಬಿಡುಗಡೆ ದಿನಾಂಕ ಘೋಷಣೆ
ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಪುಷ್ಪ- 2 ಡಿಸೆಂಬರ್ 5 ರಂದು ದೇಶದಾದ್ಯಂತ ಬಿಡುಗಡೆಯಾಗಲಿದೆ. ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಟ ಅಲ್ಲು ಅರ್ಜುನ್ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಘೋಷಣೆ ಮಾಡಿದ್ದಾರೆ.;
2021 ರಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ಬಿರುಗಾಳಿ ಎಬ್ಬಿಸಿದ ʼಪುಷ್ಪʼ ಚಿತ್ರದ ಸೀಕ್ವೆಲ್ ಚಿತ್ರಮಂದಿರಗಳಿಗೆ ಬರಲು ಸಿದ್ಧವಾಗಿದೆ. ಪುಷ್ಪ- 2 ಚಿತ್ರಕ್ಕಾಗಿ ಕಳೆದ ಮೂರು ವರ್ಷಗಳಿಂದ ಪ್ರೇಕ್ಷಕರು ಕಾಯುತ್ತಿದ್ದಾರೆ. ಕಳೆದ ವಾರ ಡಿಸೆಂಬರ್ 6 ರಂದು ಥಿಯೇಟರ್‌ಗಳಲ್ಲಿ ಸೀಕ್ವೆಲ್ ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿತ್ತು. ಆದರೆ ಈಗ ಮತ್ತೊಮ್ಮೆ ದಿನಾಂಕವನ್ನು ಬದಲಾಯಿಸಲಾಗಿದೆ.
ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಪುಷ್ಪ - 2 ಡಿಸೆಂಬರ್ 5 ರಂದು ದೇಶದಾದ್ಯಂತ ಬಿಡುಗಡೆಯಾಗಲಿದೆ. ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಟ ಅಲ್ಲು ಅರ್ಜುನ್ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಘೋಷಣೆ ಮಾಡಿದ್ದಾರೆ. ಡಿಸೆಂಬರ್ 5 ರಂದು ವಿಶ್ವದಾದ್ಯಂತ ಸಿನಿಮಾ ಬಿಡುಗಡೆಯಾಗಲಿದೆ ಎಂದು ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ಸುಕುಮಾರ್ ನಿರ್ದೇಶನದ ಪುಷ್ಪ 2 ಸಿನಿಮಾದಲ್ಲಿ ಅಲ್ಲು ಅರ್ಜುನ್‌ಗೆ ನಾಯಕಿಯಾಗಿ ರಶ್ಮಿಕಾ ನಟಿಸುತ್ತಿದ್ದು, ಫಹಾದ್ ಫಾಜಿಲ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪುಪ್ಪ ಭಾಗ 1 ಸೂಪರ್ ಹಿಟ್ ಆಗುತ್ತಿದ್ದಂತೆ ಭಾಗ 2 ರ ಮೇಲೆ ಭಾರೀ ನಿರೀಕ್ಷೆಗಳು ಹೆಚ್ಚಿವೆ. ಅದರಂತೆ ಸುಕುಮಾರ್ ಕಥೆಯಲ್ಲೂ ಭಾರಿ ಬದಲಾವಣೆ ಮಾಡಿದ್ದಾರೆ ಎನ್ನಲಾಗಿದೆ.
ಅಲ್ಲು ಅರ್ಜುನ್ ಅಕ್ಟೋಬರ್ 24 ರಂದು ಸಾಮಾಜಿಕ ಮಾಧ್ಯಮದಲ್ಲಿ ಪುಷ್ಪ 2 ರ ಹೊಸ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ಗೆ ಹಲವಾರು ಅಭಿಮಾನಿಗಳು ಕಮೆಂಟ್ ಮಾಡಿದ್ದು, ʼಪುಷ್ಪ; ದಿ ರೈಸ್ʼ ಚಿತ್ರದಲ್ಲಿ ಊ ಅಂಟಾವ ಐಟಂ ಸಾಂಗ್‌ಗೆ ಸೊಂಟ ಬಳುಕಿಸಿದ್ದ ನಟಿ ಸಮಂತಾ, ʻಸ್ಫೋಟಕ್ಕಾಗಿ ಕಾಯಲಾಗುತ್ತಿದೆʼ ಎಂದು ಕಾಮೆಂಟ್‌ನಲ್ಲಿ ಬರೆದಿದ್ದಾರೆ.
ಆಸ್ಟ್ರೇಲಿಯಾದ ಕ್ರಿಕೆಟಿಗ ಡೇವಿಡ್ ವಾರ್ನರ್, "ಗುಡ್ ಲಕ್, ಗ್ರೇಟ್ ಗೈ. ನಾನು ಅದನ್ನು ಇಷ್ಟಪಟ್ಟೆ" ಎಂದು ಪ್ರತಿಕ್ರಿಯಿಸಿದ್ದಾರೆ. ಉಳಿದ ಅಭಿಮಾನಿಗಳು ಈ ಘೋಷಣೆಯನ್ನು ಬೆಂಕಿ ಎಂದು ಕಮೆಂಟ್ ಮಾಡಿದರೆ, ಜನ ಈಗಾಗಲೇ ಇದನ್ನು ಬ್ಲಾಕ್ ಬಸ್ಟರ್ ಎಂದು ಕಮೆಂಟ್ ಮಾಡುತ್ತಿದ್ದಾರೆ.