14 ವರ್ಷದ ಬಳಿಕ 'ಮೈಲಾರಿ' ಚಂದ್ರು ಜತೆಗೆ ಶಿವಣ್ಣ ಸಿನಿಮಾ

ಸೂಪರ್ ಹಿಟ್ 'ಮೈಲಾರಿ' ಸಿನಿಮಾ ಮುಹೂರ್ತ ನೆರವೇರಿ ಇಂದಿಗೆ( ಎಪ್ರಿಲ್‌ 1) ಸರಿಯಾಗಿ 14 ವರ್ಷಗಳ ಬಳಿಕ ಶಿವಣ್ಣನ ಜೊತೆ ಆರ್‌. ಚಂದ್ರು ಹೊಸ ಸಿನಿಮಾ ಘೋಷಿಸಿದ್ದಾರೆ.

Update: 2024-04-01 10:03 GMT
ಶಿವರಾಜ್‌ಕುಮಾರ್‌ ಹಾಗೂ ಆರ್ ಚಂದ್ರು ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಘೋಷಣೆ ಆಗಿದೆ.
Click the Play button to listen to article

ಬೆಂಗಳೂರು: ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ ಹಾಗೂ ಆರ್ ಚಂದ್ರು ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಘೋಷಣೆ ಆಗಿದೆ. ಆರ್​ ಚಂದ್ರು ಅವರು ಇತ್ತೀಚೆಗೆ ‘ಆರ್​ಸಿ ಸ್ಟುಡಿಯೊ’ ಆರಂಭಿಸಿ ಐದು ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ಇದೀಗ ಆರನೇ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ಈ ಮುಂಚೆ ಈ ಜೋಡಿಯ ʻಮೈಲಾರಿʼ ಸಿನಿಮಾ ದೊಡ್ಡ ಯಶಸ್ಸು ಕಂಡಿತ್ತು. ಇದಾದ ಬಳಿಕ ಆರ್​ ಚಂದ್ರು ಅವರ ʻಕಬ್ಜʼ ಚಿತ್ರದಲ್ಲಿ ಚಿಕ್ಕ ಪಾತ್ರದಲ್ಲಿ ಶಿವರಾಜ್‌ ಕುಮಾರ್‌ ಕಾಣಿಸಿಕೊಂಡಿದ್ದರು.

2010ರಲ್ಲಿ ಶಿವರಾಜ್‌ಕುಮಾರ್‌ ಅವರ ಸೂಪರ್ ಹಿಟ್ 'ಮೈಲಾರಿ' ಸಿನಿಮಾ ಮುಹೂರ್ತ ನೆರವೇರಿ ಇಂದಿಗೆ( ಎಪ್ರಿಲ್‌ 1) ಸರಿಯಾಗಿ 14 ವರ್ಷಗಳ ಬಳಿಕ ಶಿವಣ್ಣನ ಜೊತೆ ಆರ್‌. ಚಂದ್ರು ಹೊಸ ಸಿನಿಮಾ ಘೋಷಿಸಿದ್ದಾರೆ.

ಈ ಬಗ್ಗೆ ಸೋಶಿಯಲ್‌ ಮಿಡಿಯಾದಲ್ಲಿ ಟ್ವೀಟ್‌ ಮಾಡಿರುವ ನಿರ್ದೇಶಕ, ನಿರ್ಮಾಪಕ ಆರ್‌. ಚಂದ್ರು, "ಕನ್ನಡದ ಸೂಪರ್ ಹಿಟ್ ಚಿತ್ರ ಮೈಲಾರಿ ಮುಹೂರ್ತಕ್ಕೆ 14 ವರ್ಷಗಳು ತುಂಬಿದ ಈ ಶುಭ ಸಂದರ್ಭದಲ್ಲಿ, ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ರವರಿಗೆ ಹೊಸ ಚಿತ್ರ ಆರಂಭಿಸುತ್ತಿರುವುದು ಮತ್ತಷ್ಟು ಖುಷಿ ತಂದಿದೆ. ತಮ್ಮೆಲ್ಲರ ಆಶೀರ್ವಾದ ಇರಲಿ ಧನ್ಯವಾದಗಳು" ಎಂದು ಬರೆದುಕೊಂಡಿದ್ದಾರೆ.

ಭಾರತೀಯ ಚಿತ್ರರಂಗದಲ್ಲೇ ಹೊಸ ಮೈಲುಗಲ್ಲು ಸೃಷ್ಟಿಸಿದ ನಿರ್ದೇಶಕ ಆರ್ ಚಂದ್ರು ಅವರು ಆರ್ ಸಿ ಪ್ರೊಡಕ್ಷನ್ ನಡಿ ಐದು ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ʻಶ್ರೀರಾಮಬಾಣʼ, ʻಫಾದರ್ʼ, ʻPOKʼ, ʻಡಾಗ್ʼ ಹಾಗೂ ಕಬ್ಜ-2 ಟೈಟಲ್ ಘೋಷಣೆಯಾಗಿತ್ತು.

Tags:    

Similar News