ಬಾಲಿವುಡ್‌ನ ಖ್ಯಾತ ನಟನೊಂದಿಗೆ ರಶ್ಮಿಕಾ ಮಂದಣ್ಣ ಸಿನಿಮಾ
ರಶ್ಮಿಕಾ ಮಂದಣ್ಣ ಬಾಲಿವುಡ್‌ನ ಪ್ರತಿಭಾವಂತ ಹೀರೋ ಆಯುಷ್ಮಾನ್ ಖುರಾನಾಗೆ ನಾಯಕಿಯಾಗಿದ್ದಾರೆ ಎಂದು ವರದಿಯಾಗಿದೆ. ಆಯುಷ್ಮಾನ್ ಖುರಾನ ಮತ್ತು ರಶ್ಮಿಕಾ ಅಭಿನಯಿಸಲಿರುವ ಈ ಚಿತ್ರಕ್ಕೆ ʻವ್ಯಾಂಪೈರ್ಸ್ ಆಫ್ ವಿಜಯ್ ನಗರʼ ಎಂದು ಹೆಸರಿಡಲಾಗಿದೆ.;
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಬಾಲಿವುಡ್‌ನಲ್ಲಿ ಮಿಂಚುತ್ತಿದ್ದಾರೆ. ಹಿಂದಿಯಲ್ಲಿ ಈಗಾಗಲೇ ಗುಡ್ ಬೈ, ಮಿಶನ್ ಮಜ್ನು, ಛಾವಾ ಚಿತ್ರಗಳನ್ನು ಮಾಡಿರುವ ರಶ್ಮಿಕಾ, ಸಲ್ಮಾನ್ ಖಾನ್ ಜತೆ ಕೂಡ ತೆರೆ ಹಂಚಿಕೊಳ್ಳುತ್ತಿದ್ದಾರೆ. ಸಲ್ಮಾನ್ ಅಭಿನಯದ `ಸಿಕಂದರ್’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದರ ನಡುವೆ ರಶ್ಮಿಕಾ ಮಂದಣ್ಣ ಮತ್ತೊಂದು ಹಿಂದಿ ಚಿತ್ರಕ್ಕೆ ಗ್ನೀನ್ ಸಿಗ್ನಲ್ ನೀಡಿದ್ದಾರೆ, ಬಾಲಿವುಡ್‌ನ ಪ್ರತಿಭಾವಂತ ಹೀರೋ ಆಯುಷ್ಮಾನ್ ಖುರಾನಾಗೆ ನಾಯಕಿಯಾಗಿದ್ದಾರೆ ಎಂದು ವರದಿಯಾಗಿದೆ. ಆಯುಷ್ಮಾನ್ ಖುರಾನ ಮತ್ತು ರಶ್ಮಿಕಾ ಅಭಿನಯಿಸಲಿರುವ ಈ ಚಿತ್ರಕ್ಕೆ ʻವ್ಯಾಂಪೈರ್ಸ್ ಆಫ್ ವಿಜಯ್ ನಗರʼ ಎಂದು ಹೆಸರಿಡಲಾಗಿದೆ.
ʻಸ್ತ್ರೀʼ. ʻಬೇಡಿಯಾʼ.. ʻಮುಂಜ್ಯಾʼನಂತಹ ಹಾರರ್ ಕಾಮಿಡಿ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ದಿನೇಶ್ ವಿಜನ್ ಆಯುಷ್ಮಾನ್ ಕುರಾನಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ.
ಈ ವರ್ಷದ ನವೆಂಬರ್‌ನಿಂದ ಚಿತ್ರ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. “ಇದು ಆಯುಷ್ಮಾನ್ ಖುರಾನಾ ಮತ್ತು ರಶ್ಮಿಕಾ ಮಂದಣ್ಣ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿರುವ ಮೊದಲ ಸಿನಿಮಾ. ಪ್ರಸ್ತುತ ಸಿನಿಮಾ ಸ್ಕ್ರಿಪ್ಟ್ ಆಗುತ್ತಿದೆ. ಶೀಘ್ರದಲ್ಲೇ ಪ್ರೀ-ಪ್ರೊಡಕ್ಷನ್ ಹಂತ ಮುಗಲಿದೆʼ ಎಂದು ವರದಿಯಾಗಿದೆ.
ಆದಿತ್ಯ ಸತ್ಪೋದರ್ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಸದ್ಯ ರಶ್ಮಿಕಾ ಮಂದಣ್ಣ ಪುಷ್ಪ 02 ಚಿತ್ರದ ಬಾಕಿ ಕೆಲಸ ಮುಗಿಸಿ, ಸಿಕಂದರ್ ಚಿತ್ರದ ಚಿತ್ರೀಕರಣಕ್ಕೆ ತೆರಳಲಿದ್ದಾರೆ. ಆಯುಷ್ಮಾನ್ ಖುರಾನಾ ಸದ್ಯಕ್ಕೆ ಕರಣ್ ಜೋಹರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನೂ ಆಯುಷ್ಮಾನ್ ಕೈಯಲ್ಲಿ ʻಬಾರ್ಡರ್ʼ ಚಿತ್ರದ ಸಿಕ್ವೆಲ್ ಕೂಡ ಇದೆ. ಮತ್ತೊಂದೆಡೆ, ರಶ್ಮಿಕಾ ಅವರು ಪುಷ್ಪ 2 ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಡಿಸೆಂಬರ್ 6 ರಂದು ಸಿನಿಮಾ ಬಿಡುಗಡೆಯಾಗಲಿದೆ.