ರಶ್ಮಿಕಾ ಮಂದಣ್ಣ ಅಭಿನಯದ ಹೊಸ ಸಿನಿಮಾ ʻಥಾಮಾ' ಟೀಸರ್ ರಿಲೀಸ್
ದೀಪಾವಳಿ ಹಬ್ಬದ ಪ್ರಯುಕ್ತ ರಶ್ಮಿಕಾ ಮಂದಣ್ಣ ನಟನೆಯ 'ಥಾಮಾ' ತೆರೆಕಾಣಲಿದೆ. ಇದೇ ಮೊದಲ ಬಾರಿಗೆ ಹಾರರ್ ಥ್ರಿಲ್ಲರ್ ಕಾಮಿಡಿ ಕಥಾಹಂದರ ಇರುವ ರಶ್ಮಿಕಾ ಮಂದಣ್ಣ ಅವರು ನಾಯಕಿಯಾಗಿದ್ದಾರೆ.;
ರಶ್ಮಿಕಾ ಮಂದಣ್ಣ
ನಟಿ ರಶ್ಮಿಕಾ ಮಂದಣ್ಣ ಹಾಗೂ ಆಯುಷ್ಮಾನ್ ಖುರಾನಾ ಅಭಿನಯದ ಬಹುನಿರೀಕ್ಷಿತ ಹಾರರ್ ಕಾಮಿಡಿ 'ಥಾಮಾ' ಸಿನಿಮಾ ಟೀಸರ್ ಬಿಡುಗಡೆಯಾಗಿದೆ.
ದೀಪಾವಳಿ ಹಬ್ಬದ ಪ್ರಯುಕ್ತ ರಶ್ಮಿಕಾ ಮಂದಣ್ಣ ನಟನೆಯ 'ಥಾಮಾ' ತೆರೆಕಾಣಲಿದೆ. ಇದೇ ಮೊದಲ ಬಾರಿಗೆ ಹಾರರ್ ಥ್ರಿಲ್ಲರ್ ಕಾಮಿಡಿ ಕಥಾಹಂದರ ಹೊಂದಿರುವ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ.
'ಥಾಮಾ' ಸಿನಿಮಾದಲ್ಲಿ ಹಾರರ್ ಕಾಮಿಡಿ ಜೊತೆಗೆ ಪ್ರೇಮಕಥೆ ಹೇಳುವುದಕ್ಕೆ ನಿರ್ದೇಶಕರು ಪ್ರಯತ್ನಿಸಿದ್ದಾರೆ. ಸದ್ಯ ಈ ಚಿತ್ರದ ಫಸ್ಟ್ ಲುಕ್ ಮತ್ತು ಟೀಸರ್ ಬಿಡುಗಡೆಯಾಗಿದೆ.
'ಥಾಮಾ' ಸಿನಿಮಾದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ, ನಾಯಕನಾಗಿ ಆಯುಷ್ಮಾನ್ ಖುರಾನಾ ಕಾಣಿಸಿಕೊಂಡಿದ್ದಾರೆ. ಉಳಿದಂತೆ, ಪರೇಶ್ ರಾವಲ್, ನವಾಜುದ್ದೀನ್ ಸಿದ್ದಿಕಿ, ಗೀತಾ ಅಗರ್ವಾಲ್, ಫೈಸಲ್ ಮಲಿಕ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರವು ಅಕ್ಟೋಬರ್ ತಿಂಗಳಲ್ಲಿ ತೆರೆಗೆ ಬರಲಿದೆ.
'ಮುಂಜ್ಯಾ' ಖ್ಯಾತಿಯ ಆದಿತ್ಯ ಸರ್ಪೋತದಾರ್ ಅವರು 'ಥಾಮಾ' ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಬಾಲಿವುಡ್‌ನ ಬ್ಲಾಕ್ ಬಸ್ಟರ್ ನಿರ್ಮಾಪಕ ದಿನೇಶ್ ವಿಜಾನ್ ಅವರು 'ಥಾಮಾ' ಸಿನಿಮಾಗೆ ಬಂಡವಾಳ ಹೂಡಿದ್ದಾರೆ.
ರಶ್ಮಿಕಾ ಮಂದಣ್ಣ ಈ ಮೊದಲು ರಿಲೀಸ್ ಆದ ‘ಪುಷ್ಪ 2’, ‘ಛಾವ’, ‘ಅನಿಮಲ್’ ಮೊದಲಾದ ಸಿನಿಮಾಗಳು ಭರ್ಜರಿ ಯಶಸ್ಸು ಕಂಡವು. ಈಗ ಅವರ ಹೊಸ ಸಿನಿಮಾ ಬಗ್ಗೆ ನಿರಿಕ್ಷೆ ಇದೆ.