ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ರೊಮ್ಯಾಂಟಿಕ್ ಸಾಂಗ್ ರಿಲೀಸ್
ಚಂದ್ರಜಿತ್ ಬೆಳ್ಳಿಯಪ್ಪ ಅವರ ಚೊಚ್ಚಲ ನಿರ್ದೇಶನದ, ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಮೂಡಿಬಂದಿರುವ 'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರದ ರೊಮ್ಯಾಂಟಿಕ್ ಸಾಂಗ್'ವೊಂದು ಬಿಡುಗಡೆಯಾಗಿದೆ.;
ಚಂದ್ರಜಿತ್ ಬೆಳ್ಳಿಯಪ್ಪ ಅವರ ಚೊಚ್ಚಲ ನಿರ್ದೇಶನದ, ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಮೂಡಿಬಂದಿರುವ 'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರದ ರೊಮ್ಯಾಂಟಿಕ್ ಸಾಂಗ್'ವೊಂದು ಬಿಡುಗಡೆಯಾಗಿದೆ.
ರಕ್ಷಿತ್ ಶೆಟ್ಟಿ ಹೊಸ ಪ್ರೇಮಕಥೆಯನ್ನು ನಿರ್ಮಾಣದ ಮೂಲಕ ತೋರಿಸಲು ಹೊರಟಿದ್ದು, ವಿಹಾನ್ ಮತ್ತು ಅಂಕಿತಾ ಈ ಸುಂದರ ಜೋಡಿ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ‘ಓ ಅನಾಹಿತ’ ಎಂಬ ಹಾಡು ಕಲರ್‌ಫುಲ್ ಆಗಿ ಮೂಡಿ ಬಂದಿದ್ದು, ಹಾಡಿನ ಲಿರಿಕ್ಸ್ ಮ್ಯೂಸಿಕ್ ಪ್ರಿಯರಿಗೆ ನಾಟುವಂತಿದೆ.
ಬಿಡುಗಡೆಗೆ ಸಜ್ಜಾಗಿರುವ ಈ ಚಿತ್ರದಲ್ಲಿ ಒಟ್ಟು 6 ಹಾಡುಗಳಿದ್ದು, ಗಗನ್ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ. ನಿರ್ದೇಶಕ ಚಂದ್ರಜಿತ್ ಬೆಳ್ಳಿಯಪ್ಪ ಅವರೇ ಈ ಹಾಡನ್ನು ಬರೆದಿದ್ದು, ಮೂಲ ಸಂಯೋಜನೆಯನ್ನೂ ಮಾಡಿದ್ದಾರೆ. ಮಾನ್ಸೂನ್ ರಾಗ ಖ್ಯಾತಿಯ ದೀಕ್ಷಿತ್ ಈ ಗೀತೆಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಕಪಿಲ್ ಕಪಿಲನ್ ಈ ಹಾಡನ್ನು ಹಾಡಿದ್ದಾರೆ.
ಪಂಚತಂತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ವಿಹಾನ್ ಈ ಚಿತ್ರದಲ್ಲಿ ನಾಯಕನ ಪಾತ್ರ ನಿರ್ವಹಿಸಿದ್ದಾರೆ. ಐದು ವರ್ಷಗಳ ನಂತರ ವಿಹಾನ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಕಿರುತೆರೆಯ ಮೂಲಕ ಜನಮನಸೂರೆಗೊಂಡಿರುವ ಅಂಕಿತ ಅಮರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ತೆಲುಗಿನ ಸೂಪರ್ ಹಿಟ್ 'ಗೀತಾಂಜಲಿ' ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ಗಿರಿಜಾ ಶೆಟ್ಟರ್ ಬಹಳ ವರ್ಷಗಳ ನಂತರ ಅಭಿನಯಕ್ಕೆ ಮರಳಿ ಬಂದಿದ್ದಾರೆ. ಮಯೂರಿ ನಟರಾಜ್ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಈ ಹಿಂದೆ ರಕ್ಷಿತ್ ಶೆಟ್ಟಿ ಅವರೊಂದಿಗೆ ಕಿರಿಕ್ ಪಾರ್ಟಿ ಮತ್ತು ಅವನೇ ಶ್ರೀಮನ್ನಾರಾಯಣ ಚಿತ್ರಗಳಲ್ಲಿ ಕೆಲಸ ಮಾಡಿದ್ದ ಚಂದ್ರಶೇಖರ್ ಬೆಳ್ಳಿಯಪ್ಪ, ಇಬ್ಬನಿ ತಬ್ಬಿದ ಇಳೆಯಲಿ ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್ ವುಡ್'ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ.