ಯಶ್‌ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರತಂಡ ಸೇರಿದ ರುಕ್ಮಿಣಿ ವಸಂತ್

ಟಾಕ್ಸಿಕ್ ಬಗ್ಗೆ ಹೆಚ್ಚಿನ ವಿವರಗಳನ್ನು ಗೌಪ್ಯವಾಗಿಡಲಾಗಿದ್ದರೂ, ರುಕ್ಮಿಣಿ ಈಗಾಗಲೇ ಈ ಯೋಜನೆಗಾಗಿ ಒಂದೆರಡು ವೇಳಾಪಟ್ಟಿಗಳನ್ನು ಪೂರ್ಣಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.;

Update: 2025-08-18 13:56 GMT

ರುಕ್ಮಿಣಿ ವಸಂತ್

ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾದ ಮೂಲಕ ಖ್ಯಾತಿ ಗಳಿಸಿದ ನಟಿ ರುಕ್ಮಿಣಿ ವಸಂತ್, ಯಶ್ ನಟನೆಯ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್‌' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರವು ಈಗಾಗಲೇ ಭಾರಿ ಕುತೂಹಲವನ್ನು ಹುಟ್ಟುಹಾಕಿದೆ. ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ ಅವರಂತಹ ನಟಿಯರು ಈಗಾಗಲೇ ಚಿತ್ರತಂಡ ಸೇರಿಕೊಂಡಿದ್ದು, ರುಕ್ಮಿಣಿ ವಸಂತ್ ಕೂಡ ಚಿತ್ರತಂಡ ಸೇರಿದ್ದಾರೆ ಎಂದು ತಿಳಿದುಬಂದಿದೆ. 

ಟಾಕ್ಸಿಕ್ ಬಗ್ಗೆ ಹೆಚ್ಚಿನ ವಿವರಗಳನ್ನು ಗೌಪ್ಯವಾಗಿಡಲಾಗಿದ್ದರೂ, ರುಕ್ಮಿಣಿ ಈಗಾಗಲೇ ಈ ಯೋಜನೆಗಾಗಿ ಒಂದೆರಡು ವೇಳಾಪಟ್ಟಿಗಳನ್ನು ಪೂರ್ಣಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಧಿಕೃತ ಘೋಷಣೆ ಬಾಕಿಯಿದೆ.

ವೆಂಕಟ್ ನಾರಾಯಣ ಅವರ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರವನ್ನು ಭಾರಿ ಬಜೆಟ್‌ನಲ್ಲಿ ನಿರ್ಮಿಸಲಾಗುತ್ತಿದೆ. ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲೂ ಚಿತ್ರೀಕರಿಸಲಾಗಿದ್ದು, ಬಹು ಭಾಷೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಟಾಕ್ಸಿಕ್ ಚಿತ್ರಕ್ಕೆ ರಾಜೀವ್ ರೈ ಅವರ ಛಾಯಾಗ್ರಹಣವಿದೆ. ಮುಂದಿನ ವರ್ಷ ಮಾರ್ಚ್ 19 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಹೊಂಬಾಳೆ ಫಿಲ್ಮ್ಸ್ ನಿರ್ಮಿಸುತ್ತಿರುವ ಮತ್ತು ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ರಿಷಬ್ ಶೆಟ್ಟಿ ನಿರ್ದೇಶನದ ಮತ್ತು ನಟನೆಯ ಬಹುನಿರೀಕ್ಷಿತ ಕಾಂತಾರ; ಚಾಪ್ಟರ್ 1ರಲ್ಲಿ ರುಕ್ಮಿಣಿ ವಸಂತ್ ನಟಿಸಿದ್ದಾರೆ. ಇದಲ್ಲದೆ ಶಿವಕಾರ್ತಿಕೇಯನ್ ಜೊತೆ ಚಿತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ಪ್ರಶಾಂತ್ ನೀಲ್ ನಿರ್ದೇಶನದ ಮುಂದಿನ ಚಿತ್ರದಲ್ಲಿ ತೆಲುಗಿನ ಖ್ಯಾತ ನಟ ಜೂನಿಯರ್ ಎನ್‌ಟಿಆರ್ ಜೊತೆ ಕಾಣಿಸಿಕೊಳ್ಳಲಿದ್ದಾರೆ.

Tags:    

Similar News