ಸಲ್ಮಾನ್ ಖಾನ್ ಪ್ರಕರಣ: ಆರೋಪಿ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಯಲ್ಲಿ ಸಾವು

Update: 2024-05-01 12:42 GMT

ಮುಂಬೈ, ಮೇ 1 -ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಗುಂಡು ಹಾರಿಸಿದ ಪ್ರಕರಣದಲ್ಲಿ ಬಂಧಿತ ವ್ಯಕ್ತಿಯೊಬ್ಬರು ಅಪರಾಧ ವಿಭಾಗದ ಲಾಕ್‌ಅಪ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಳಿಕ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಅನುಜ್ ಥಾಪನ್ (23) ಅವರು ಬೆಡ್‌ಶೀಟ್ ಬಳಸಿ ಲಾಕ್‌ಅಪ್‌ನ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಸರ್ಕಾರಿ ಜಿಟಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಮುಂಬೈನ ಆಜಾದ್ ಮೈದಾನ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದಲ್ಲಿ ಬಂಧಿತರಾದ ಶೂಟರ್‌ಗಳಾದ ಸಾಗರ್ ಪಾಲ್ ಮತ್ತು ವಿಕ್ಕಿ ಗುಪ್ತಾ ಅವರಿಗೆ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡಿದ ಸೋನು ಕುಮಾರ್ ಬಿಷ್ಣೋಯ್ ಅವರೊಂದಿಗೆ ಥಾಪನ್ ಅವರನ್ನು ಪಂಜಾಬ್‌ನಿಂದ ಬಂಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Similar News