ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ ʻಕ್ರೀಂʼ
ʻಕಿರಿಕ್ ಪಾರ್ಟಿʼ ಚಿತ್ರದ ಮೂಲಕ ಎಲ್ಲರ ಗಮನ ಸೆಳೆದ ನಟಿ ಸಂಯುಕ್ತ ಹೆಗಡೆ ಪ್ರಮುಖ ಪಾತ್ರದಲ್ಲಿರುವ ʻಕ್ರೀಂʼ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.;
ʻಕಿರಿಕ್ ಪಾರ್ಟಿʼ ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ನಟಿ ಸಂಯುಕ್ತ ಹೆಗಡೆ ಪ್ರಮುಖಪಾತ್ರದಲ್ಲಿರುವ ʻಕ್ರೀಂʼ ಚಿತ್ರದ ಟ್ರೇಲರ್ ಇತ್ತೀಚೆಗೆ A2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಲೇಖಕ ಅಗ್ನಿ ಶ್ರೀಧರ್ ಟ್ರೇಲರ್ ಬಿಡುಗಡೆ ಮಾಡಿದರು.
ಅಭಿಷೇಕ್ ಬಸಂತ್ ನಿರ್ದೇಶನ, ಡಿ.ಕೆ.ದೇವೇಂದ್ರ ಅವರು ನಿರ್ಮಾಪಕ, ಅಗ್ನಿ ಶ್ರೀಧರ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಬರೆದಿದ್ದಾರೆ. ʻ ಚಿತ್ರದ ಬಗ್ಗೆ ಭರವಸೆಯಿಟ್ಟುಕೊಂಡಿದ್ದೇನೆ. ಎಲ್ಲಾ ಊರುಗಳಲ್ಲಿ, ಎಲ್ಲಾ ರಾಜ್ಯಗಳಲ್ಲಿ, ಎಲ್ಲಾ ಭಾಷೆಗಳಲ್ಲಿ ಕಾಣದ ಗರ್ಭ ಅಂತ ಇರುತ್ತದೆ. ಅಲ್ಲಿ ಏನೆಲ್ಲಾ ನಡೆಯುತ್ತದೆ. ಬೆಂಗಳೂರಿನಲ್ಲೇ ನನಗೆ ಗೊತ್ತಿರುವ ಸಂಗತಿಯಿಟ್ಟುಕೊಂಡು ಹತ್ತಾರು ವರ್ಷಗಳಿಂದ ಯೋಚನೆ ಮಾಡುತ್ತಿದ್ದೆ. ಸಿನಿಮಾ ಮಾಡಲು ಆಗಿರಲಿಲ್ಲ. ನಿರ್ಮಾಪಕ ದೇವೇಂದ್ರ ಅವರು ಸಿನಿಮಾ ಮಾಡಲೇಬೇಕು ಎಂದು ಒತ್ತಾಯಿಸಿದಾಗ ಈ ಚಿತ್ರದ ಕಥೆ ಹೇಳಿದೆ ಎಂದು ಹೇಳಿದರು.
ನಾಯಕಿ ಸಂಯುಕ್ತ ಹೆಗಡೆ ಮಾತನಾಡಿ,ʻನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಐದು ವರ್ಷಗಳ ನಂತರ ನಟಿಸಿರುವ ಸಿನಿಮಾ ಇದು. ಆಕ್ಷನ್ ಕೂಡ ಮಾಡಿದ್ದೇನೆ. ಕಾಲು ಕೂಡ ಮುರಿದಿತ್ತು. ಒಟ್ಟಿನಲ್ಲಿ ಎಲ್ಲರ ಶ್ರಮದಿಂದ ಚಿತ್ರ ಚೆನ್ನಾಗಿ ಬಂದಿದೆʼ ಎಂದರು.
ಸಂಗೀತ ನಿರ್ದೇಶಕ ರೋಹಿತ್, ಕಲಾ ನಿರ್ದೇಶಕ ಶಿವಕುಮಾರ್, ರೋಷನ್ ಅಗ್ನಿ ಶ್ರೀಧರ್ ಬಚ್ಚನ್, ಇಫ್ರಾನ್ ಮುಂತಾದವರು ಮಾತನಾಡಿದರು.