Sanju Weds Geetha 2| ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಜನವರಿ 17ಕ್ಕೆ ಬಿಡುಗಡೆ
Sanju Weds Geetha 2 | ಶ್ರೀನಗರ ಕಿಟ್ಟಿ, ರಚಿತಾ ರಾಮ್ ಮುಖ್ಯ ಭೂಮಿಕೆಯ ಸಿನಿಮಾ 'ಸಂಜು ವೆಡ್ಸ್ ಗೀತಾ 2' ಸಿನಿಮಾಗೆ ನಾಗಶೇಖರ್ ನಿರ್ದೇಶನ ಮಾಡಿದ್ದಾರೆ.;
ಶ್ರೀನಗರ ಕಿಟ್ಟಿ, ರಚಿತಾ ರಾಮ್ ನಟನೆಯ ‘ಸಂಜು ವೆಡ್ಸ್ ಗೀತಾ 2’ ಚಿತ್ರತಂಡ ಹೊಸ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. ‘ಸಂಜು ವೆಡ್ಸ್ ಗೀತಾ 2’ ಜನವರಿ 17ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.
ಜನವರಿ 10ರಂದು ಸಿನಿಮಾ ಬಿಡುಗಡೆಯಾಬೇಕಿತ್ತು. ಆದರೆ ಬಿಡುಗಡೆ ಹೈದರಾಬಾದ್ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು. ಆದರೆ ಇದೀಗ ಕೋರ್ಟ್ ತಡೆಯಾಜ್ಞೆ ತೆರವಾದ ಹಿನ್ನೆಲೆಯಲ್ಲಿ ಚಿತ್ರತಂಡ ಸಿನಿಮಾದ ಹೊಸ ದಿನಾಂಕ ಘೋಷಣೆ ಮಾಡಿದೆ.
‘ಸಂಜು ವೆಡ್ಸ್ ಗೀತಾ 2’ ವಿರುದ್ಧ ಹೈದರಾಬಾದ್ನ ಫೈನ್ಯಾನ್ಶಿಯರ್ ಒಬ್ಬರು ಕೋರ್ಟ್ ಮೆಟ್ಟಿಲೇರಿದ್ದರು,. ಸಿನಿಮಾದ ನಿರ್ದೇಶಕ ನಾಗಶೇಖರ್ ಅವರು ತೆಲುಗಿನಲ್ಲಿ ನಿರ್ದೇಶನ ಮಾಡಿದ್ದ ‘ಗುರ್ತುಂದಾ ಸೀತಾಕಾಲಂ’ ಸಿನಿಮಾದ ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ನಿರ್ಮಾಪಕರು, ಫೈನ್ಯಾನ್ಶಿಯರ್ ಹಾಗೂ ನಾಗಶೇಖರ್ ನಡುವೆ ಭಿನ್ನಾಭಿಪ್ರಾಯ ಇತ್ತು. ಈ ಕಾರಣಕ್ಕೆ ಅವರು ‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದರು. ‘ಸಂಜು ವೆಡ್ಸ್ ಗೀತಾ 2’ಕ್ಕೆ ನಾಗಶೇಖರ್ ನಿರ್ಮಾಪಕ ಅಲ್ಲದಿರುವ ಕಾರಣ ತಡೆಯಾಜ್ಞೆ ತೆರವು ಮಾಡಲಾಗಿದೆ.
ಶ್ರೀನಗರ ಕಿಟ್ಟಿ, ರಚಿತಾ ರಾಮ್ ಮುಖ್ಯ ಭೂಮಿಕೆಯ 'ಸಂಜು ವೆಡ್ಸ್ ಗೀತಾ 2' ಸಿನಿಮಾಗೆ ನಾಗಶೇಖರ್ ನಿರ್ದೇಶನ ಮಾಡಿದ್ದಾರೆ. ಟೈಟಲ್ ಕಾರಣದಿಂದಲೇ 'ಸಂಜು ವೆಡ್ಸ್ ಗೀತಾ 2' ಚಿತ್ರ ನಿರೀಕ್ಷೆ ಮೂಡಿಸಿದೆ. 'ಸಂಜು ವೆಡ್ಸ್ ಗೀತಾ 2' ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ರಚಿತಾ ರಾಮ್, ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಶ್ರೀಧರ ವಿ. ಸಂಭ್ರಮ್ ಸಂಗೀತ ಸಂಯೋಜಿಸಿದ್ದಾರೆ.