ರಾಜ್ಯದಾದ್ಯಂತ ಏಪ್ರಿಲ್ 12ಕ್ಕೆ 'Scam 1770' ಚಿತ್ರ ತೆರೆಗೆ
ಡಿ.ಕ್ರಿಯೇಷನ್ಸ್ ಲಾಂಛನದಲ್ಲಿ ದೇವರಾಜ್ ಆರ್ ನಿರ್ಮಿಸಿರುವ, ವಿಕಾಸ್ ಪುಷ್ಪಗಿರಿ ನಿರ್ದೇಶಿಸಿರುವ ‘SCAM 1770’ ಚಿತ್ರ ಈ ವಾರ(ಏಪ್ರಿಲ್ 12) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.;
ವಿಕಾಸ್ ಪುಷ್ಪಗಿರಿ ನಿರ್ದೇಶನದ 'ಸ್ಕ್ಯಾಮ್ 1770' ರ ಚಿತ್ರ ಏಪ್ರಿಲ್ 12 ರಂದು ರಾಜ್ಯಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ.
ಡಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದೇವರಾಜ್ ಆರ್ ನಿರ್ಮಾಣದ ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ನಿರ್ದೇಶನದ ಸ.ಹಿ.ಪ್ರಾ. ಶಾಲೆ ಚಿತ್ರದಲ್ಲಿ ದಡ್ಡ ಪ್ರವೀಣಾ ಪಾತ್ರಕ್ಕೆ ಹೆಸರುವಾಸಿಯಾದ ರಂಜನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇದೊಂದು ಪ್ರಸ್ತುತ ಶಿಕ್ಷಣ ವ್ಯವಸ್ಥೆ ಆಧಾರಿತ ಚಿತ್ರ. ಸತ್ಯ ಘಟನೆಗಳನ್ನು ಕಟ್ಟಿಕೊಂಡು ವಾಸ್ತವದಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬ ವಿಚಾರವನ್ನು ಇಟ್ಟುಕೊಂಡು ಮಾಡಿರುವ ಸಿನಿಮಾ SCAM 1770. ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಸಂಸ್ಥೆ ನಡೆಸುತ್ತಿರುವವರು ನೋಡಲೇ ಬೇಕಾದ ಚಿತ್ರವಿದು.
ಡಾ.ಇಂದು ನಟೇಶ್ ಹಾಗೂ ಅಡ್ವೊಕೇಟ್ ನೇತ್ರಾವತಿ ಅವರು ಕಥೆ ಬರೆದಿದ್ದು, ವಿಕಾಸ್ ಪುಷ್ಪಗಿರಿ ಹಾಗೂ ಶಂಕರ್ ರಾಮನ್ ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಶಂಕರ್ ರಾಮನ್ ಅವರದು. ಸತೀಶ್ ಆರ್ಯನ್ ಸಂಗೀತ ನಿರ್ದೇಶನ, ಶೋಯೆಬ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಕಲೈ - ರಾಮು ನೃತ್ಯ ನಿರ್ದೇಶನ ಹಾಗೂ ಚಂದ್ರು ಬಂಡೆ ಸಾಹಸ ನಿರ್ದೇಶನ ‘SCAM 1770’ ಚಿತ್ರಕ್ಕಿದೆ.
ಸ್ಕ್ಯಾಮ್ 1770 ಚಿತ್ರದಲ್ಲಿ ನಿಶ್ಚಿತಾ ನಾಯಕಿಯಾಗಿ ನಟಿಸಿದ್ದಾರೆ. ಇದರೊಂದಿಗೆ ಹರಿಣಿ, ನಾರಾಯಣಸ್ವಾಮಿ, ಪ್ರಶಾಂತ್ ಮತ್ತು ರಾಘು ಶಿವಮೊಗ್ಗ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಸತೀಶ್ ಆರ್ಯನ್ ಸಂಗೀತ ಸಂಯೋಜಿಸಿದ್ದರೆ, ನಿರ್ದೇಶಕರೊಂದಿಗೆ ಶಂಕರ್ ರಾಮನ್ ಚಿತ್ರಕಥೆ ಬರೆದಿದ್ದಾರೆ.