Chhoo Mantar | ಶರಣ್‌ ನಟನೆಯ ʻಛೂ ಮಂತರ್ʼ ಸಿನಿಮಾ ಜ.10ಕ್ಕೆ ರಿಲೀಸ್‌

ಜನವರಿ 10 ರಂದು ಛೂ ಮಂತರ್ ಸಿನಿಮಾ ಬಿಡುಗಡೆಯಾಗಲಿದೆ. ಇದೇ ಸಮಯದಲ್ಲಿ ಬೇರೆ ಭಾಷೆಗಳ ಚಿತ್ರಗಳು ಬಿಡುಗಡೆಯಾಗಲಿದೆ.;

Update: 2025-01-09 10:45 GMT
ಛೂ ಮಂತರ್
Click the Play button to listen to article

ಹಾಸ್ಯ ನಟ ಶರಣ್‌ ನಟನೆಯ ʻಛೂ ಮಂತರ್ʼ ಸಿನಿಮಾ ಜನವರಿ 10 ರಂದು ರಾಜ್ಯದಾದ್ಯಂತ ತೆರೆಕಾಣಲಿದೆ. 

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, "ಕರ್ವ"‌ ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ  ನೆರವೇರಿತು.

ಕಾರ್ಯಕ್ರಮದಲ್ಲಿ ನಟಿ ಮಾಲಾಶ್ರೀ, ಡಾಲಿ ಧನಂಜಯ, ಗುರುಕಿರಣ್, ರಿಷಿ, ಪ್ರಥಮ್, ಅಮೂಲ್ಯ, ಧೀರೇನ್ ರಾಮಕುಮಾರ್, ತಿಲಕ್, ಮಾಲಾಶ್ರೀ ಪುತ್ರಿ ಆರಾಧನಾ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಪದಾಧಿಕಾರಿಗಳಾದ ಪ್ರವೀಣ್ ಕುಮಾರ್, ಚಿಂಗಾರಿ ಮಹದೇವ್, ನಿರ್ಮಾಪಕ ಕಿರಣ್ ಬರ್ತೂರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. 

ಈ ವೇಳೆ ಮಾತನಾಡಿದ ನಿರ್ಮಾಪಕ ತರುಣ್ ಶಿವಪ್ಪ, ಜನವರಿ 10 ರಂದು ಛೂ ಮಂತರ್ ಸಿನಿಮಾ ಬಿಡುಗಡೆಯಾಗಲಿದೆ. ಇದೇ ಸಮಯದಲ್ಲಿ ಬೇರೆ ಭಾಷೆಗಳ ಚಿತ್ರಗಳೂ ಬಿಡುಗಡೆಯಾಗಲಿದೆ. ಹಾಗಾಗಿ ನಮಗೆ ಸಾಕಷ್ಟು ಚಿತ್ರಮಂದಿರಗಳು ಸಿಗುತ್ತಿಲ್ಲ. ಮಂಡ್ಯದಂತಹ ಕನ್ನಡಿಗರೇ ಹೆಚ್ಚಿರುವ ಊರಿನಲ್ಲೂ ಚಿತ್ರಮಂದಿರ ಸಿಗದಿರುವುದು ತುಂಬಾ ಬೇಸರವಾಗಿದೆ. ಈ ಕುರಿತು ನಾವು ವಾಣಿಜ್ಯ ಮಂಡಳಿ ಮೊರೆ ಹೋಗಿದ್ದು, ನಮಗೆ ಸಾಕಷ್ಟು ಚಿತ್ರಮಂದಿರಗಳು ಸಿಗುವ ಭರವಸೆ ಇದೆ ಎಂದರು.

ಸಿನಿಮಾದ ನಾಯಕ ಶರಣ್ ಮಾತನಾಡಿ, ಈ ಚಿತ್ರದಲ್ಲಿ ನಾನೊಬ್ಬನೇ ನಾಯಕನಲ್ಲ. ಇದರಲ್ಲಿ ಅಭಿನಯಿಸಿರುವ ಎಲ್ಲರೂ ನಾಯಕರೆ. ಒಟ್ಟಾರೆ ಇಡೀ ಚಿತ್ರತಂಡದ ಶ್ರಮದಿಂದ ಒಂದೊಳ್ಳೆ ಚಿತ್ರ ನಿರ್ಮಾಣವಾಗಿದೆ. ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ನಮ್ಮ ಚಿತ್ರ ಎಲ್ಲರ ಮನ ತಲುಪಿದೆ. ಚಿತ್ರ ಗೆಲ್ಲುವ ಭರವಸೆ ಇದೆ. ಇಂದು ನಮ್ಮ‌ ಚಿತ್ರಕ್ಕೆ ಪ್ರೋತ್ಸಾಹ ನೀಡಲು ಇಷ್ಟು ಜನ ಕಲಾವಿದರು ಬಂದಿರುವುದು ತುಂಬಾ ಖುಷಿಯಾಗಿದೆ ಎಂದು ಅವರು ತಿಳಿಸಿದರು. 

 ಪ್ರಭು ಮುಂಡ್ಕರ್, ಮೇಘನಾ ಗಾಂವ್ಕರ್, ರಂಜನಿ ರಾಘವನ್, ನರಸಿಂಹ ಜಾಲಹಳ್ಳಿ, ಅವಿನಾಶ್ ಬಸತ್ಕೂರ್ ಸೇರಿದಂತೆ ಅನೇಕ ತಂತ್ರಜ್ಞರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಶರಣ್, ಚಿಕ್ಕಣ್ಣ, ಮೇಘನಾ ಗಾಂವ್ಕರ್, ಅಧಿತಿ ಪ್ರಭುದೇವ, ಪ್ರಭು ಮುಂಡ್ಕರ್, ರಂಜನಿ ರಾಘವನ್, ನರಸಿಂಹ ಜಾಲಹಳ್ಳಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ನಿರ್ದೇಶನವಿರುವ ʻಛೂ ಮಂತರ್ʼ ಸಿನಿಮಾಗೆ ಚಿತ್ರಕ್ಕೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

ತಮ್ಮ ಕಾಮಿಡಿ ಸಿನಿಮಾಗಳಿಗೆ ಹೆಸರಾದ ನಟ ಶರಣ್ ಕಾಮಿಡಿ ಜಗತ್ತಿನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಇದೀಗ ನಟ ಶರಣ್ ಅವರು ಪೂರ್ಣ ಪ್ರಮಾಣದ ಹಾರರ್ ಸಿನಿಮಾ ಛೂ ಮಂತರ್‌ ಮೂಲಕ ವಿಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ.

Tags:    

Similar News