ಶರಣ್ ಅಭಿನಯದ ಬಹು ನಿರೀಕ್ಷಿತ ʼಛೂ ಮಂತರ್ʼ ಚಿತ್ರ ಏಪ್ರಿಲ್ 5ಕ್ಕೆ ತೆರೆಗೆ
ಶರಣ್ ನಾಯಕ ನಟನಾಗಿ ಅಭಿನಯಿಸಿರುವ ಛೂ ಮಂತರ್ ಸಿನಿಮಾ ಏಪ್ರಿಲ್ 5 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.;
By : The Federal
Update: 2024-03-06 12:44 GMT
ಶರಣ್ ನಾಯಕ ನಟನಾಗಿ ಅಭಿನಯಿಸಿರುವ ಛೂ ಮಂತರ್ ಸಿನಿಮಾ ಏಪ್ರಿಲ್ 5 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.
ಈ ಸಿನಿಮಾವನ್ನು ʼಕರ್ವʼ ಖ್ಯಾತಿಯ ನವನೀತ್ ನಿರ್ದೇಶಿಸಿದ್ದಾರೆ. ಈ ಸಿನಿಮಾ ಟೀಸರ್ ಮೂಲಕ ಮನೆಮಾತಾಗಿರುತ್ತು.
ಇದೊಂದು ಹಾರಾರ್ ಚಿತ್ರವಾಗಿದ್ದು, ಈ ಹಿಂದೆ ಬಂದಿರುವ ಹಾರಾರ್ ಚಿತ್ರಗಳಿಗಿಂತ ಸ್ವಲ್ಪ ವಿಭಿನ್ನವಾಗಿದೆ. ಶರಣ್ ಅವರ ಪಾತ್ರ ಕೂಡ ಈ ಹಿಂದಿನ ಚಿತ್ರಗಳಿಗಿಂತ ಬೇರೆ ರೀತಿಯಲ್ಲಿಯೇ ಇದೆ. ʼಉಪಾಧ್ಯಕ್ಷʼನಾಗಿ ಯಶಸ್ಸು ಕಂಡಿರುವ ಚಿಕ್ಕಣ್ಣ ಕೂಡ ಈ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ.
ಮೇಘನಾ ಗಾಂವ್ಕರ್, ಅಧಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರವನ್ನು ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿದ್ದಾರೆ.