‘ಕೆಡಿ’ ಶೂಟಿಂಗ್ ಪೂರ್ಣಗೊಳಿಸಿದ ಶಿಲ್ಪಾ ಶೆಟ್ಟಿ: ವಿಡಿಯೋ ಹಂಚಿಕೊಂಡ ನಟಿ
ಕನ್ನಡದ ‘ಕೆಡಿ’ ಸಿನಿಮಾದಲ್ಲಿ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ನಟಿಸುತ್ತಿದ್ದು, ಇದೀಗ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದ್ದಾರೆ.;
ಕನ್ನಡದ ‘ಕೆಡಿ’ ಸಿನಿಮಾದಲ್ಲಿ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ನಟಿಸುತ್ತಿದ್ದು, ಇದೀಗ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದ್ದಾರೆ.
ಮೈಸೂರಿನಲ್ಲಿ ‘ಕೆಡಿ’ ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ಈಗ ಅವರು ಚಿತ್ರೀಕರಣ ಮುಗಿಸಿದ್ದಾರೆ. ಈ ಖುಷಿಯಲ್ಲಿ ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಕೊನೇ ದಿನ ಶೂಟಿಂಗ್ ಸೆಟ್ನಿಂದಲೇ ಶಿಲ್ಪಾ ಶೆಟ್ಟಿ ಅವರು ವಿಡಿಯೋ ಮಾಡಿದ್ದಾರೆ. ನಿರ್ದೇಶಕ ‘ಜೋಗಿ’ ಪ್ರೇಮ್ ಸೇರಿದಂತೆ ಇಡೀ ಚಿತ್ರತಂಡದವರ ಜೊತೆ ಶಿಲ್ಪಾ ಶೆಟ್ಟಿ ಖುಷಿ ಖುಷಿಯಿಂದ ಪೋಸ್ ನೀಡಿದ್ದಾರೆ.
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ನಿರ್ದೇಶಕ ಪ್ರೇಮ್ ಕಾಂಬಿನೇಶನ್ ಇರುವ ʻಕೆಡಿ’ ಸಿನಿಮಾದಲ್ಲಿ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ನಟಿಸಿದ್ದಾರೆ. ಇನ್ನು ಬಾಲಿವುಡ್ ನಟ ಸಂಜಯ್ ದತ್ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿಭಾಯಿಸಲಿದ್ದಾರೆ.
‘ಕೆಡಿ’ ಸಿನಿಮಾದಲ್ಲಿ ರೆಟ್ರೋ ಕಾಲದ ಕಥೆ ಇರಲಿದೆ. ಅದಕ್ಕೆ ತಕ್ಕಂತೆಯೇ ಕಲಾವಿದರ ವೇಷಭೂಷಣ ಇದೆ. ಶಿಲ್ಪಾ ಶೆಟ್ಟಿ ಅವರು ಫಸ್ಟ್ ಲುಕ್ ಪೋಸ್ಟರ್ ಅನ್ನು ಕೆಲವು ತಿಂಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಸೀರೆ ಗೆಟಪ್ನಲ್ಲಿ ಅವರು ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕೊನೇ ದಿನ ಶೂಟಿಂಗ್ನಲ್ಲೂ ಅವರು ಇದೇ ಗೆಟಪ್ ಧರಿಸಿದ್ದಾರೆ. ಶೂಟಿಂಗ್ ಮುಗಿದ ಖುಷಿಯಲ್ಲಿ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ.
ಇನ್ನು ಈ ಸಿನಿಮಾ ಡಿಸೆಂಬರ್‌ನಲ್ಲಿ ತೆರೆ ಕಾಣುತ್ತಿದೆ. ಶಿಲ್ಪಾ ಶೆಟ್ಟಿ 17 ವರ್ಷಗಳ ನಂತರ ಇದೀಗ ʼಕೆಡಿ’ ಸಿನಿಮಾದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ʼಪ್ರೀತ್ಸೋದ್ ತಪ್ಪಾ?ʼ, ʼಆಟೋ ಶಂಕರ್ʼ, ʼಒಂದಾಗೋಣ ಬಾʼ ಸಿನಿಮಾಗಳಲ್ಲಿ ಶಿಲ್ಪಾ ಅಭಿನಯಿಸಿದ್ದಾರೆ.