ಶಿವರಾಜ್​ಕುಮಾರ್ ಅಭಿನಯದ ‘ಉತ್ತರಕಾಂಡ’ ಮಾಲೀಕ ಲುಕ್‌ ಬಿಡುಗಡೆ

ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಚಿತ್ರ ʼಉತ್ತರಕಾಂಡʼ ಇದೀಗ ಬಹು ಬೇಡಿಕೆಯಲ್ಲಿದ್ದ ಲುಕ್ ಒಂದನ್ನು ಬಿಡುಗಡೆ ಮಾಡಿದೆ. ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಫಸ್ಟ್ ಲುಕ್ ಬಿಡುಗಡೆ ಮಾಡಿದೆ.;

Update: 2024-07-11 13:40 GMT
ಉತ್ತರಕಾಂಡ ಸಿನಿಮಾದ ಶಿವರಾಜ್‌ ಕುಮಾರ್‌ ಅವರ ಫಸ್ಟ್‌ ಲುಕ್‌ ಬಿಡುಗಡೆಯಾಗಿದೆ.
Click the Play button to listen to article

ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಚಿತ್ರ `ಉತ್ತರಕಾಂಡ' ಇದೀಗ ಬಹು ಬೇಡಿಕೆಯಲ್ಲಿದ್ದ ಲುಕ್ ಒಂದನ್ನು ಬಿಡುಗಡೆ ಮಾಡಿದೆ. ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದೆ.

ಶಿವರಾಜ್​ಕುಮಾರ್ ಅವರು ‘ಉತ್ತರಕಾಂಡ’ ಚಿತ್ರದಲ್ಲಿ ‘ಮಾಲಿಕ್’ ಹೆಸರಿನ ಪಾತ್ರ ಮಾಡುತ್ತಿದ್ದಾರೆ. “ಮಾಲೀಕ” ನ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ಶಿವಣ್ಣ ತಮ್ಮ ಲುಕ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಬಹು ನಿರೀಕ್ಷಿತ ಚಿತ್ರ “ಉತ್ತರಕಾಂಡ” ಒಂದು ಆಕ್ಷನ್‌ ಡ್ರಾಮಾ ಚಿತ್ರವಾಗಿದ್ದು, ಇದು ರೋಹಿತ್‌ ಪದಕಿ ಅವರ ಚಿತ್ರವಾಗಿದೆ. ಚಿತ್ರಕ್ಕೆ ಖ್ಯಾತ ಗಾಯಕ, ಸಂಯೋಜಕ ಅಮಿತ್‌ ತ್ರಿವೇದಿ ಸಂಗೀತ ಸಂಯೋಜನೆ ಮಾಡಿದ್ದು, ಅಧ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ಚಿತ್ರಕ್ಕೆ ವಿಶ್ವಾಸ್‌ ಕಶ್ಯಪ್‌ ಪ್ರೊಡಕ್ಷನ್‌ ವಿನ್ಯಾಸ ಮಾಡಿದ್ದು, ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿದ್ದಾರೆ. ಕಾರ್ತಿಕ್‌ ಗೌಡ ಮತ್ತು ಯೋಗಿ ಜಿ ರಾಜ್‌ ಕೆ.ಆರ್.ಜಿ. ಸ್ಟೂಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ.

ಏ.18ರಂದು ಚಿತ್ರತಂಡ ದಿಗಂತ್‌ ಅವರ ಲುಕ್‌ ಅನಾವರಣಗೊಳಿಸಿತ್ತು. ʼಮಿರ್ಚಿ ಮಲ್ಲಿಗೆʼ ಎಂಬ ಪಾತ್ರದಲ್ಲಿ ದಿಗಂತ್ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ‌ʼಟೋಬಿʼ, ʼಸಪ್ತ ಸಾಗರದಾಚೆ ಸೈಡ್‌ ಬಿʼ ಮುಂತಾದ ಸಿನಿಮಾಗಳಲ್ಲಿ ಗಮನ ಸೆಳೆದಿದ್ದ ಚೈತ್ರಾ ʼಉತ್ತರಕಾಂಡʼ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಒಳಗೊಂಡ ʼಉತ್ತರಕಾಂಡʼ ಸಿನಿಮಾಕ್ಕೆ ರೋಹಿತ್ ಪದಕಿ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಡಾ.ಶಿವರಾಜ್‌ ಕುಮಾರ್‌, ನಟರಾಕ್ಷಸ ಡಾಲಿ ಧನಂಜಯ, ಭಾವನಾ ಮೆನನ್‌, ಐಶ್ವರ್ಯ ರಾಜೇಶ್‌, ದಿಗಂತ್‌ ಮುಂತಾದವರ ತಾರಾಬಳಗವಿದೆ.

Tags:    

Similar News