45 Trailer| ‘45’ ಟ್ರೇಲರ್ ಇಂದು, ಡಿಸೆಂಬರ್ 25ಕ್ಕೆ ಸಿನಿಮಾ ರಿಲೀಸ್
'45' ಚಿತ್ರದ ಪ್ರಚಾರ ಕಾರ್ಯವೂ ವೇಗ ಪಡೆದುಕೊಂಡಿದ್ದು, ಟ್ರೇಲರ್ ಬಿಡುಗಡೆಗೆ ಸಿದ್ಧತೆಗಳು ನಡೆದಿವೆ. ಸೋಮವಾರ ರಾತ್ರಿ 8:01 ಕ್ಕೆ ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಈ ಟ್ರೇಲರ್ ಬಿಡುಗಡೆಗಾಗಿ ನಿರ್ದೇಶಕರು ಒಂದು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಮುಖ್ಯಭೂಮಿಕೆಯಲ್ಲಿರುವ, ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಕನ್ನಡ ಚಿತ್ರ '45'ಕ್ಕೆ ಕ್ಷಣಗಣನೆ ಶುರುವಾಗಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಮುಖ್ಯಭೂಮಿಕೆಯಲ್ಲಿರುವ, ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಕನ್ನಡ ಚಿತ್ರ '45'ಕ್ಕೆ ಕ್ಷಣಗಣನೆ ಶುರುವಾಗಿದೆ. ನಿರ್ಮಾಪಕ ರಮೇಶ್ ರೆಡ್ಡಿ ಅವರ 'ಸೂರಜ್ ಪ್ರೊಡಕ್ಷನ್ಸ್' ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರು ಮೊದಲ ಬಾರಿಗೆ ಆಕ್ಷನ್-ಕಟ್ ಹೇಳಿದ್ದಾರೆ. ‘45’ ಚಿತ್ರತಂಡವು ಇಂದು (ಡಿ. 15) ರಂದು ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.
ಟ್ರೇಲರ್ ಬಿಡುಗಡೆಗೆ ವಿಶೇಷ ಯೋಜನೆ
'45' ಚಿತ್ರದ ಪ್ರಚಾರ ಕಾರ್ಯವೂ ವೇಗ ಪಡೆದುಕೊಂಡಿದ್ದು, ಟ್ರೇಲರ್ ಬಿಡುಗಡೆಗೆ ಸಿದ್ಧತೆಗಳು ನಡೆದಿವೆ. ಸೋಮವಾರ ರಾತ್ರಿ 8:01ಕ್ಕೆ ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಈ ಟ್ರೇಲರ್ ಬಿಡುಗಡೆಗಾಗಿ ನಿರ್ದೇಶಕರು ಒಂದು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಉಪಗ್ರಹದ ಮೂಲಕ ರಾಜ್ಯದ ಏಳು ಜಿಲ್ಲೆಗಳ ಆಯ್ದ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಮಾಡಲು ಯೋಜನೆ ರೂಪಿಸಲಾಗಿದೆ. ಇದು ಅಭಿಮಾನಿಗಳಿಗೆ ಟ್ರೇಲರ್‌ನ ದೃಶ್ಯಗಳನ್ನು ದೊಡ್ಡ ಪರದೆಯಲ್ಲಿ ವೀಕ್ಷಿಸಲು ಅವಕಾಶ ನೀಡಲಿದೆ. ಮೂವರು ಪ್ರಮುಖ ನಟರ ವಿಭಿನ್ನ ಪಾತ್ರಗಳು ಮತ್ತು ಅಸಾಮಾನ್ಯ ವಿಷಯವು ಪ್ರೇಕ್ಷಕರಲ್ಲಿ ಈಗಾಗಲೇ ಕುತೂಹಲ ಮೂಡಿಸಿದೆ.
ಸಿನಿಮಾ ಬಿಡುಗಡೆ ಯಾವಾಗ?
ಕ್ರಿಸ್ಮಸ್ ಹಬ್ಬದಂದು, ಅಂದರೆ ಡಿಸೆಂಬರ್ 25 ರಂದು, '45' ಚಿತ್ರವು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಈ ಸಿನಿಮಾ ತೆರೆಗೆ ಬರುತ್ತಿದೆ. ವಿಶಿಷ್ಟ ಕಥಾಹಂದರವನ್ನು ಹೊಂದಿರುವ ಈ ಸಿನಿಮಾ, ಬಿಡುಗಡೆಗೂ ಮುನ್ನವೇ ಸ್ಯಾಟಲೈಟ್ ಮತ್ತು ಡಿಜಿಟಲ್ ಹಕ್ಕುಗಳನ್ನು ಮಾರಾಟ ಮಾಡಿ ಇತ್ತೀಚಿನ ಕನ್ನಡ ಚಿತ್ರಗಳಲ್ಲಿ ಅಪರೂಪದ ಸಾಧನೆ ಮಾಡಿದೆ. ಚಿತ್ರದ ಪೋಸ್ಟರ್‌ಗಳಲ್ಲಿ ಝೀ ಕನ್ನಡ ಮತ್ತು ಝೀ5 ಲೋಗೊಗಳು ಪ್ರಮುಖವಾಗಿ ಕಾಣಿಸಿಕೊಂಡಿದ್ದು, ಥಿಯೇಟರ್ ಪ್ರದರ್ಶನದ ನಂತರ ಚಿತ್ರವು ಝೀ5 ಓಟಿಟಿ ವೇದಿಕೆಯಲ್ಲಿ ಪ್ರೀಮಿಯರ್ ಆಗಲಿದೆ ಮತ್ತು ಝೀ ಕನ್ನಡ ವಾಹಿನಿಯಲ್ಲಿ ಟಿವಿ ಪ್ರಸಾರ ಕಾಣಲಿದೆ ಎಂದು ತಿಳಿದುಬಂದಿದೆ. ಆದರೂ ನಿಖರವಾದ ಸ್ಟ್ರೀಮಿಂಗ್ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲ.
ಈ ಸಿನಿಮಾಕ್ಕೆ ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಸಾಹಸ ನಿರ್ದೇಶಕರಾಗಿ ಕೆ. ರವಿ ವರ್ಮಾ, ಜಾಲಿ ಬಾಸ್ಟಿನ್, ಡಿಫ್ರೆಂಟ್ ಡ್ಯಾನಿ ಮತ್ತು ಚೇತನ್ ಡಿಸೋಜಾ ಅವರಂತಹ ಅನುಭವಿಗಳು ಕಾರ್ಯನಿರ್ವಹಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಚಿತ್ರದ ‘ಆಫ್ರೋ ದಬಾಂಗ್’ ಎಂಬ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ದೊಡ್ಡ ಮಟ್ಟದ ಪ್ರಚಾರ ಪಡೆದುಕೊಂಡಿದೆ.