ಬೆಂಗಳೂರು ಚರ್ಚ್‌ ಸ್ಟ್ರೀಟ್‌ನಲ್ಲಿ ಶೂಟಿಂಗ್‌ ನಿರ್ಬಂಧ!

ಬೆಂಗಳೂರಿನ ಜನನಿಬಿಡ ಪ್ರದೇಶ ಎಂದೇ ಫೇ‌ಮಸ್ ಆಗಿರುವ ಚರ್ಚ್ ಸ್ಟ್ರೀಟ್‌ನಲ್ಲಿ ಚಲನಚಿತ್ರ ಚಿತ್ರೀಕರಣಕ್ಕೆ ಬಿಬಿಎಂಪಿ ನಿರ್ಬಂಧ ಹೇರಿದೆ.

Update: 2024-03-06 02:40 GMT
ಬೆಂಗಳೂರಿನ ಚರ್ಚ್‌ ಸ್ಟ್ರೀಟ್‌ನಲ್ಲಿ ಶೂಟಿಂಗ್‌ ಮಾಡುವುದನ್ನು ನಿಷೇಧಿಸಲಾಗಿದೆ.
Click the Play button to listen to article

ಬೆಂಗಳೂರು: ಬೆಂಗಳೂರಿನ ಜನನಿಬಿಡ ಪ್ರದೇಶ ಎಂದೇ ಫೇ‌ಮಸ್ ಆಗಿರುವ ಚರ್ಚ್ ಸ್ಟ್ರೀಟ್‌ನಲ್ಲಿ ಚಲನಚಿತ್ರ ಚಿತ್ರೀಕರಣಕ್ಕೆ ಬಿಬಿಎಂಪಿ ನಿರ್ಬಂಧ ಹೇರಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಈ ಬಗ್ಗೆ ಆದೇಶ ಹೊರಡಿಸಿದ್ದು, ಸಂಚಾರ ದಟ್ಟಣೆಯ ಕಾರಣವನ್ನು ನೀಡಿದೆ.

ಚರ್ಚ್ ಸ್ಟ್ರೀಟ್‌ನಲ್ಲಿ ಚಲನಚಿತ್ರಗಳ ಚಿತ್ರೀಕರಣವನ್ನು ನಿರ್ಬಂಧಿಸಲಾಗಿದೆ. ಮತ್ತು ಚಿತ್ರೀಕರಣಕ್ಕೆ ಪೊಲೀಸರು ಅಥವಾ ಕೆಎಫ್‌ಸಿಸಿ ಅನುಮತಿ ನೀಡಲು ಸಾಧ್ಯವಿಲ್ಲ. ಅದೊಂದು ಜನನಿಬಿಡ ರಸ್ತೆ. ಸಿನಿಮಾ ಚಿತ್ರೀಕರಣ ಸಂಚಾರಕ್ಕೆ ಅಡ್ಡಿಯಾಗಲಿದೆ. ಹೀಗಾಗಿ ಚಿತ್ರೀಕರಣಕ್ಕೆ ಬಿಬಿಎಂಪಿ ನಿರ್ಬಂಧಿಸಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ವಾರಾಂತ್ಯಗಳಲ್ಲಿ ಪಾರ್ಟಿಗೆ ಹೋಗುವವರಿಗೆ ಮತ್ತು ಖರೀದಿದಾರರಿಗೆ ಮುಖ್ಯ ಆಕರ್ಷಣೆಯಾಗಿರುವ ಚರ್ಚ್ ಸ್ಟ್ರೀಟ್‌ನಲ್ಲಿ ಕಳೆದ ಭಾನುವಾರ ಸಿನಿಮಾ ಚಿತ್ರೀಕರಣ ನಡೆದಿತ್ತು. ಇದರಿಂದ ವ್ಯಾಪಾರಿಗಳಿಗೆ ಹಾಗೂ ಗ್ರಾಹಕರಿಗೆ ಭಾರೀ ಸಮಸ್ಯೆಯಾಗಿತ್ತು. ಸೂಕ್ತ ಅನುಮತಿ ಪಡೆಯದೇ ಸಿನಿಮಾ ಚಿತ್ರೀಕರಣ ನಡೆಸಲಾಗುತ್ತಿದೆ ಎಂದು ಆರೋಪ ಕೇಳಿಬಂದಿತ್ತು. ಇವೆಲ್ಲವನ್ನು ಗಮನಿಸಿದ ಬಿಬಿಎಂಪಿ ಈ ಆದೇಶವನ್ನು ಹೊರಡಿಸಿದೆ.

Tags:    

Similar News