ʼಕುಲದಲ್ಲಿ ಕೀಳ್ಯಾವುದೋʼ ಸಿನಿಮಾದ ಟೀಸರ್ ಬಿಡುಗಡೆ

`ಕಾಮಿಡಿ ಕಿಲಾಡಿಗಳು' ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ `ಕುಲದಲ್ಲಿ ಕೀಳ್ಯಾವುದೋ' ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ.

Update: 2024-08-27 12:05 GMT
`ಕುಲದಲ್ಲಿ ಕೀಳ್ಯಾವುದೋ' ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ.

`ಕಾಮಿಡಿ ಕಿಲಾಡಿಗಳು' ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ `ಕುಲದಲ್ಲಿ ಕೀಳ್ಯಾವುದೋ' ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. 

 ಈ ಸಿನಿಮಾವನ್ನು ಯೋಗರಾಜ್ ಸಿನಿಮಾಸ್ ಹಾಗೂ ಪರ್ಲ್ ಸಿನಿ ಕ್ರಿಯೇಷನ್ಸ್ ನಿರ್ಮಾಣ ಮಾಡಿದ್ದು, ಕೆ‌.ರಾಮ್ ನಾರಾಯಣ್ ನಿರ್ದೇಶನ ಮಾಡಿದ್ದಾರೆ.

ಟೀಸರ್ ನಲ್ಲಿ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ. ಸಕಲೇಶಪುರ, ಹಾಸನ, ರಾಮನಗರ, ಬೆಂಗಳೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ.ರಾಮ್ ನಾರಾಯಣ್ ನಿರ್ದೇಶನ ಮಾಡುತ್ತಿದ್ದಾರೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು ಮನೋಮೂರ್ತಿ ಸಂಗೀತ ನೀಡುತ್ತಿದ್ದಾರೆ.

ಮಡೆನೂರ್ ಮನು, ಮೌನ ಗುಡ್ಡೆಮನೆ, ರಂಗಾಯಣ ರಘು, ದಿಗಂತ್‌, ಶರತ್ ಲೋಹಿತಾಶ್ವ, ಸೋನಾಲ್ ಮೊಂತೆರೊ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Tags:    

Similar News