ಜನಮನಸೂರೆಗೊಳ್ಳುತ್ತಿದೆ ʼBADʼ ಚಿತ್ರದ ಸುಂದರ ಯುಗಳಗೀತೆ
ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ ʼBADʼ ಚಿತ್ರಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಅವರೆ ಸಂಕಲನ ಕಾರ್ಯ ಮಾಡಿದ್ದಾರೆ.;
ಪಿ.ಸಿ.ಶೇಖರ್ ನಿರ್ದೇಶನದ ಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ʼBADʼ ಚಿತ್ರಕ್ಕಾಗಿ ಚಿತ್ರ ಸಾಹಿತಿ ಕವಿರಾಜ್ ʼಮಾತಿಗೂ ಮಾತಿಗೂʼ ಎಂಬ ಸುಂದರ ಯುಗಳಗೀತೆ ಬರೆದಿದ್ದಾರೆ.
ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಸರಿಗಮಪ ಖ್ಯಾತಿಯ ಪೃಥ್ವಿ ಭಟ್ ಹಾಗೂ ಸುನೀಲ್ ಗುಜಗೊಂಡ ಹಾಡಿದ್ದಾರೆ. ಝೇಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಹಾಡು ಜನಮನಸೂರೆಗೊಳ್ಳುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.
ಈಗಾಗಲೇ ಟೀಸರ್ ಹಾಗೂ ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ ʼBADʼ ಚಿತ್ರ, ಹಾಡುಗಳ ಮೂಲಕವೂ ಜನಪ್ರಿಯವಾಗುತ್ತಿದೆ. ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.
ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ ʼBADʼ ಚಿತ್ರಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಅವರೆ ಸಂಕಲನ ಕಾರ್ಯ ಮಾಡಿದ್ದಾರೆ. ಜಿ.ರಾಜಶೇಖರ್ ಕಲಾ ನಿರ್ದೇಶನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣ, ಸಚಿನ್ ಜಡೇಶ್ವರ ಎಸ್ ಬಿ ಸಂಭಾಷಣೆ ಬರೆದಿದ್ದಾರೆ.
ʼಪ್ರೀತಿಯ ರಾಯಭಾರಿʼ ಚಿತ್ರದ ಮೂಲಕ ಜನರ ಮನಗೆದ್ದಿರುವ ನಕುಲ್ ಗೌಡ ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.