ರಾಗಿಣಿ ಅಭಿನಯದ ʻಬಿಂಗೊʼ ಚಿತ್ರದ ಡಬ್ಬಿಂಗ್‌ ಮುಕ್ತಾಯ

ಸಸ್ಪೆನ್ಸ್ ಥ್ರಿಲ್ಲರ್ ಜಾನರ್‌ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಮೇ 24ರಂದು ನಟಿ ರಾಗಿಣಿ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ “ಬಿಂಗೊ” ಚಿತ್ರತಂಡ ರಾಗಿಣಿ ಅವರಿಗೆ ಶುಭಾಶಯ ತಿಳಿಸಿದೆ.;

Update: 2024-05-27 07:18 GMT
ರಾಗಿಣಿ ದ್ವಿವೇದಿ
Click the Play button to listen to article

“ಶಂಭೋ ಶಿವ ಶಂಕರ” ಚಿತ್ರ ನಿರ್ದೇಶಕ ಶಂಕರ್ ಕೋನಮಾನಹಳ್ಳಿ ಅವರ ನಿರ್ದೇಶನದಲ್ಲಿ “ಬಿಂಗೊ” ಚಿತ್ರದ ಡಬ್ಬಿಂಗ್ ಮುಕ್ತಾಯಗೊಂಡಿದೆ. ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ನಾಯಕ – ನಾಯಕಿಯಾಗಿ ನಟಿಸಿರುವ ಸಿನಿಮಾ ಇದು. “ಬಿಂಗೊ” ಚಿತ್ರದ ಡಬ್ಬಿಂಗ್ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೊದಲ್ಲಿ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗಿವೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಸಸ್ಪೆನ್ಸ್ ಥ್ರಿಲ್ಲರ್ ಜಾನರ್‌ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಮೇ 24ರಂದು ನಟಿ ರಾಗಿಣಿ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ “ಬಿಂಗೊ” ಚಿತ್ರತಂಡ ರಾಗಿಣಿ ಅವರಿಗೆ ಶುಭಾಶಯ ತಿಳಿಸಿದೆ. ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ , ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಸಿನಿಮಾಕ್ಕಿದೆ.

Tags:    

Similar News