ನಟನೆಗೆ ಮರಳಿದ ಗೀತರಚನೆಕಾರ
ಖ್ಯಾತ ಗೀತರಚನೆಕಾರ ವಿ ನಾಗೇಂದ್ರ ಪ್ರಸಾದ್ ಅವರು 'ಕೃಷ್ಣಾವತಾರ' ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.;
By : The Federal
Update: 2024-03-29 14:12 GMT
ಖ್ಯಾತ ಗೀತರಚನೆಕಾರ ವಿ ನಾಗೇಂದ್ರ ಪ್ರಸಾದ್ ಅವರು 'ಕೃಷ್ಣಾವತಾರ' ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಕಲಿಯುಗದಲ್ಲಿ ಪ್ರಕೃತಿ, ಪರಿಸರ ಉಳಿಸಲು ಹೊಸ ಅವತಾರ ಎತ್ತಿದವನ ಕಥೆಯನ್ನು ಈ ಸಿನಿಮಾ ಹೊಂದಿದ್ದು, ಸಿರಿ ವೈ.ಎಸ್.ಆರ್. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಮಾಯಾಬಜಾರ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗುರುಪ್ರಸಾದ್ ಕೆ. ಬಂಡವಾಳ ಹೂಡಿದ್ದಾರೆ. ಶುಭ ರಕ್ಷಾ, ತ್ರಿವೇಣಿ ರಾಜ್ ಚಿತ್ರದ ನಾಯಕಿಯರಾಗಿದ್ದಾರೆ.
ಈ ಚಿತ್ರಕ್ಕೆ ರಾಜ ಶಿವಶಂಕರ್ ಛಾಯಾಗ್ರಹಣವಿದ್ದು, ಎಬಿಎಂ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಶ್ವನಾಥ್, ಮಾನಸಿ ಸುಧೀರ್, ರಘು ರಾಮನಕೊಪ್ಪ, ಪ್ರಕಾಶ್ ತುಮ್ಮಿನಾಡ್ ಮುಂತಾದವರು ತಾರಾಗಣದಲ್ಲಿದ್ದಾರೆ.